Monday, October 14, 2024
Monday, October 14, 2024

ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರೂ ನೀಡಿ: ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರೂ ನೀಡಿ: ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

Date:

ಬೆಳಗಾವಿ, ಅ.13: ಸವದತ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆ ಭಾನುವಾರ ನಡೆಯಿತು. ಭಕ್ತಾಧಿಗಳು ಅಡ್ಡಲಗಿ ತುಂಬಿಸಿ ಜೋಗತಿಯರಿಗೆ ನೈವೇದ್ಯ ಸಮರ್ಪಿಸುವುದು ಇಲ್ಲಿನ ಪದ್ದತಿಯಾಗಿದ್ದು, ಜನಸಂದಣಿ ಹೆಚ್ಚಾಗಿರುವಾಗ ದರ್ಶನ ಅಸಾಧ್ಯವಾಗುತ್ತಿದೆ, ಆದ್ದರಿಂದ ಎಲ್ಲರಿಗೂ ಸೂಕ್ತ‌ ವ್ಯವಸ್ಥೆ ಕಲ್ಪಿಸಬೇಕು, ಕ್ಷೇತ್ರದ ಒಟ್ಟಾರೆ ಅಭಿವೃದ್ಧಿಗೆ ಸರಕಾರದ‌ ವತಿಯಿಂದ 25 ಕೋಟಿ ರೂಪಾಯಿ ನೀಡುವಂತೆ‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಭೆಯಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ, ಮುಜರಾಯಿ ಹಾಗೂ ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ, ವಾಯವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರಾದ ಭರಮಗೌಡ ಕಾಗೆ, ಶಾಸಕರಾದ ವಿಶ್ವಾಸ್ ವೈದ್ಯ, ಬಾಬಾಸಾಹೇಬ್ ಪಾಟೀಲ, ಆಸಿಫ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ.ವಿ.ರಾಜೇಂದ್ರ, ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ: ಭವ್ಯ ಶೋಭಾಯಾತ್ರೆ

ಉಡುಪಿ, ಅ.13: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಉಡುಪಿ ಇದರ ವತಿಯಿಂದ...

ಮಾತೃಹೃದಯಿ ರತನ್ ಟಾಟಾ

ಗಣಿತನಗರ, ಅ.13: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಗಲಿದ ಉದ್ಯಮ...

ಕಾರಂತ ದೀವಿಗೆ 2024

ಕುಂದಾಪುರ, ಅ.13: ಶ್ರೀ ಶಾರದಾ ಕಾಲೇಜು ಬಸ್ಸೂರು ಕುಂದಾಪುರ ಇಲ್ಲಿನ ಕನ್ನಡ...
error: Content is protected !!