ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 2,172 ಮನೆಗಳ ಕಾಮಗಾರಿಯಲ್ಲಿ ಆರಂಭಿಕ ಹಂತದಲ್ಲಿ ಪೂರ್ಣಗೊಂಡಿರುವ 500 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗಳನ್ನು ಹಸ್ತಾಂತರಿಸಿದರು. ಸ್ವಂತ ಸೂರಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲೆಂದು ಶುಭ ಹಾರೈಸಿದರು. ಉಳಿದ ಮನೆಗಳ ನಿರ್ಮಾಣ ಕಾರ್ಯ ಕೂಡ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ಕೂಡ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಸೇರಿ ಶಾಸಕರು ಮತ್ತು ಇತರೆ ಪ್ರಮುಖರು ಉಪಸ್ಥಿತರಿದ್ದರು.