Saturday, October 19, 2024
Saturday, October 19, 2024

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

Date:

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ ಪ್ರತಿಭೆ ಅನಾವರಣಕ್ಕೆ ಕೃಷ್ಣ ವೇಷ ಸ್ಪರ್ಧೆಗಳೇ ಬುನಾದಿ. ಕಾರಂತರಿಗೆ ಮಕ್ಕಳೆಂದರೆ ಅಚ್ಚುಮೆಚ್ಚು ಅವರ ನೆನಪಿನಲ್ಲಿ ನಿರ್ಮಾಣವಾದ ಈ ಸ್ಥಳದಲ್ಲಿ ಮಕ್ಕಳಿಗಾಗಿಯೇ ಹೆಚ್ಚೆಚ್ಚು ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಸಾಂಸ್ಕೃತಿಕ ಚಿಂತಕಿ ಗೀತಾ ಆನಂದ್ ಸಿ ಕುಂದರ್ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆದ ಡಾ.
ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ (ರಿ.) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಕೋಟತಟ್ಟು ಮಹಿಳಾ ಮಂಡಲ ಕೋಟ, ರೋಟರಿ ಕ್ಲಬ್ ಹಂಗಾರಕಟ್ಟೆ- ಸಾಸ್ತಾನ ಸಹಯೋಗದಲ್ಲಿ ಕಾರಂತ ಹುಟ್ಟೂರ ಪುರಸ್ಕಾರದ ವಿಂಶತಿ ಅಂಗವಾಗಿ, ಕಾರಂತ ಜನುಮದಿನದಂದು ಮುದ್ದು ಕೃಷ್ಣ ವೇಷ ಸ್ಪರ್ಧೆ ಉದ್ಘಾಟಿಸಿ ಮಾತನಾಡುತ್ತಿದ್ದರು.

ವೇದಿಕೆಯಲ್ಲಿ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲಾ ಸೋಮಶೇಖರ್, ರೋಟರಿ ಕ್ಲಬ್ ಹಂಗಾರಕಟ್ಟೆ – ಸಾಸ್ತಾನದ ಅಧ್ಯಕ್ಷೆಯಾದ ಲೀಲಾವತಿ ಗಂಗಾಧರ, ಸಾಂಸ್ಕೃತಿಕ ಚಿಂತಕ ವೆಂಕಟೇಶ್ ಭಟ್ ಉಪಸ್ಥಿತರಿದ್ದರು. ಶಿಕ್ಷಕ ಸತೀಶ್ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಾಸ್ತಾವಿಕವಾಗಿ ಮಾತನಾಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ವಿಧಾನಪರಿಷತ್ ಉಪಚುನಾವಣೆ: ನಿಷೇಧಾಜ್ಞೆ ಜಾರಿ

ಉಡುಪಿ, ಅ.18: ಕರ್ನಾಟಕ ವಿಧಾನಪರಿಷತ್ ಉಪ-ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21...
error: Content is protected !!