Sunday, October 20, 2024
Sunday, October 20, 2024

ಪಂಚವರ್ಣ ರಾಜ್ಯೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಪಂಚವರ್ಣ ರಾಜ್ಯೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Date:

ಮಣಿಪಾಲ, ಅ.19: ಸಂಘಸಂಸ್ಥೆಗಳು ನಿತ್ಯನಿರಂತರವಾಗಿ ಸಾಮಾಜಿಕ ಕಳಕಳಿಯೊಂದಿಗೆ ಪರಿಸರವನ್ನು ಪ್ರೀತಿಸಿ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುತ್ತಿರಬೇಕು. ಈ ದಿಸೆಯಲ್ಲಿ ಪಂಚವರ್ಣದ ಸಮಾಜಮುಖಿ ಕಾರ್ಯ ಮಾದರಿಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದರು. ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲದ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ನವೆಂಬರ್ ೧೬ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಮುಖ್ಯ ಅಭ್ಯಾಗತರಾಗಿ ಉಡುಪಿಯ ಸೃಷ್ಠಿ ಇಂಜಿನಿಯರ್ ಮುಖ್ಯಸ್ಥ ಜಯರಾಜ್ ವಿ ಶೆಟ್ಟಿ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಜೆಸಿಐ ಕೋಟ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಮಣೂರು ಫ್ರೆಂಡ್ಸ್ ನಿಕಟಪೂರ್ವ ಅಧ್ಯಕ್ಷ ದಿನೇಶ್ ಆಚಾರ್, ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಅಧ್ಯಕ್ಷೆ ವನೀತಾ ಉಪಾಧ್ಯ, ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ವಸಂತಿ ಹಂದಟ್ಟು ಮುಂತಾದವರು ಉಪಸ್ಥಿತರಿದ್ದರು. ಪಂಚವರ್ಣ ಕಾರ್ಯಾಧ್ಯಕ್ಷ ರವೀಂದ್ರ ಕೋಟ ನಿರ್ವಹಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬುಲೆಟಿನ್ ವರದಿ ಇಮ್ಪ್ಯಾಕ್ಟ್; ಕಲ್ಸಂಕ ಫುಟ್ಪಾತ್ ನಲ್ಲಿದ್ದ ಕೇಬಲ್ ವಯರ್ ತೆರವು

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...
error: Content is protected !!