Sunday, November 24, 2024
Sunday, November 24, 2024

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ

Date:

ಉಡುಪಿ, ಅ.21: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಅಕ್ಟೋಬರ್ 23 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಕಾರ್ಕಳ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ದೂ.ಸಂ: 0820-2536661, ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!