Sunday, November 24, 2024
Sunday, November 24, 2024

ರೆಡ್‌ಕ್ರಾಸ್ ನಾಯಕರಿಗೆ ತರಬೇತಿ ಕಾರ್ಯಾಗಾರ

ರೆಡ್‌ಕ್ರಾಸ್ ನಾಯಕರಿಗೆ ತರಬೇತಿ ಕಾರ್ಯಾಗಾರ

Date:

ಉಡುಪಿ, ಅ.21: ಮಂಗಳೂರು ವಿಶ್ವವಿದ್ಯಾನಿಲಯ ರೆಡ್‌ಕ್ರಾಸ್ ಘಟಕ ಮತ್ತು ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್‌ಕ್ರಾಸ್ ಘಟಕಗಳು ಅನುಷ್ಠಾನದಲ್ಲಿರುವ ಜಿಲ್ಲೆಯ ಕಾಲೇಜುಗಳ ರೆಡ್‌ಕ್ರಾಸ್ ಘಟಕದ ನಾಯಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ಸೋಮವಾರ ನಗರದ ಅಜ್ಜರಕಾಡುವಿನ ರೆಡ್‌ಕ್ರಾಸ್ ಭವನದಲ್ಲಿ ನಡೆಯಿತು. ರೆಡ್‌ಕ್ರಾಸ್ ರಾಜ್ಯ ಶಾಖೆಯ ಆಡಳಿತ ಮಂಡಳಿ ಸದಸ್ಯ ವಿ.ಜಿ. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಪದವಿ ಶಿಕ್ಷಣದಿಂದಲೇ ರೂಡಿಸಿಕೊಳ್ಳುವಂತೆ ತಿಳಿಸಿದರು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್ ಮಾತನಾಡಿ, ಮಾನವ ಸಂಪನ್ಮೂಲದ ಅಭಿವೃದ್ಧಿಯಲ್ಲಿ ತರಬೇತಿ ಕಾರ್ಯಾಗಾರವು ಬಹು ಮುಖ್ಯವಾದುದು ಎಂದರು.

ಜಿಲ್ಲಾ ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಜುನಾಥ ಪೈ ಮೆಮೊರಿಯಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್‌ಕ್ರಾಸ್ ಸಂಯೋಜಕಿ ಡಾ. ದಿವ್ಯಾ ಪ್ರಭು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ರೆಡ್‌ಕ್ರಾಸ್ ಕಾರ್ಯಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ, ರೆಡ್‌ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!