Friday, January 10, 2025
Friday, January 10, 2025

ಪಂಚವರ್ಣ ಕಾರ್ಯಕ್ರಮ ವಿಶಿಷ್ಟ

ಪಂಚವರ್ಣ ಕಾರ್ಯಕ್ರಮ ವಿಶಿಷ್ಟ

Date:

ಕೋಟ, ಅ.27: ಪಂಚವರ್ಣ ಸಂಸ್ಥೆಯ ಕಾರ್ಯಕ್ರಮಗಳೇ ವಿಶಿಷ್ಟವಾದದ್ದು ಜತೆಗೆ ಮನೆಮಾತಾಗಿ ಬೆಳೆದು ನಿಂತಿದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ಚಂದ್ರ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ನವೆಂಬರ್ ೧೬ ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂಚವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸಮಾಜದ ಒರೆಕೋರೆಗಳನ್ನು ತಿದ್ದುವ ಜತೆಗೆ ಸಮಾಜಮುಖಿ ಚಿಂತನೆಗಳನ್ನು ಸದಾ ಪಸರಿಸುವ ಸಂಘಟನೆಗಳು ಅಗತ್ಯ ಈ ದಿಸೆಯಲ್ಲಿ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ಹುಟ್ಟುಹಾಕಿ ದೊಡ್ಡ ದೊಡ್ಡ ಸಾಧಕರನ್ನು ಗೌರವಿಸುವ ಜತೆಗೆ ವಿದ್ಯಾರ್ಥಿಗಳನ್ನು ದತ್ತು ಪಡೆಯುವ, ಪರಿಸರ ಸ್ನೇಹಿ ಕಾರ್ಯಕ್ರಮಗಳು ಸಂಸ್ಥೆಯ ಕಾರ್ಯವೈಖರಿ ಹಿಡಿದ ಕೈಗನ್ನಡಿ ಇಂತಹ ಸಂಘಟನೆಗಳು ಊರಿನಲ್ಲಿ ಗಟ್ಟಿಯಾಗಿ ಬೇರೂರಬೇಕು ಎಂದು ಆಶಿಸಿದರು. ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ್ ಸಿ ಕುಂದರ್ ಶುಭ ಹಾರೈಸಿ ಮಾತನಾಡಿ ಪಂಚವರ್ಣದ ಕಾರ್ಯಕ್ರಮಗಳು ಪಂಚಮುಖಿಯಾಗಿ ಗ್ರಾಮದ ಸರ್ವತೋಮುಖ ಅಭಿವೃದ್ಧಿ ನಾಂದಿಯಾಗಿದೆ. ರಾಜ್ಯೋತ್ಸವದ ಮೂಲಕ ಸಾಧಕರಿಗೆ ಬಹುದೊಡ್ಡ ಗೌರವವನ್ನು ನೀಡುತ್ತಿದೆ ಎಂದರು.

ಗೀತಾನಂದ ಟ್ರಸ್ಟ್ ನಿರ್ದೇಶಕಿ ಗೀತಾ ಎ ಕುಂದರ್ ಮನಸ್ಮಿತ ಫೌಂಡೇಶನ್ ಪ್ರವರ್ತಕ ಮನೋವೈದ್ಯ ಡಾ.ಪ್ರಕಾಶ್ ಸಿ ತೋಳಾರ್, ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಟ್ರಸ್ಟಿ ಕೆ. ಅನಂತಪದ್ಮನಾಭ ಐತಾಳ್, ಪಂಚವರ್ಣದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್, ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಅಧ್ಯಕ್ಷೆ ವನೀತಾ ಉಪಾಧ್ಯ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚವರ್ಣ ಯುವಕ ಮಂಡಲದ ಸದಸ್ಯ ಸಂತೋಷ್ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿ ಕಾರ್ಯಕ್ರಮ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾವಿತ್ರಿ ಬಾ ಪುಲೆ ಜನ್ಮದಿನಾಚರಣೆ

ಕುಂದಾಪುರ, ಜ.9: ಸರಕಾರಿ ಪದವಿಪೂರ್ವ ಕಾಲೇಜು ನಾವುಂದ ಇಲ್ಲಿ ರೇಂಜರ್ಸ್ ಮತ್ತು...

ವಿವಿಧ ಚಟುವಟಿಕೆಗಳಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

ಉಡುಪಿ, ಜ.9: ಕೃಷಿ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ...

ಪ್ರತಿಭಾ ಕಾರಂಜಿಯಲ್ಲಿ ಸಾಯ್ಬ್ರಕಟ್ಟೆ ಶಾಲೆಯ ಪ್ರಣೀತಾ ಪ್ರಥಮ

ಕೋಟ, ಜ.9: ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬೈದೆಬೆಟ್ಟು...

ಜೇಸಿಐ ಶಂಕರನಾರಾಯಣ ಪದಾಧಿಕಾರಿಗಳ ಆಯ್ಕೆ

ಶಂಕರನಾರಾಯಣ, ಜ.9: ಜೇಸಿಐ ಶಂಕರನಾರಾಯಣ ಇದರ 2025ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್...
error: Content is protected !!