Saturday, November 23, 2024
Saturday, November 23, 2024

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಸರ್ದಾರ್ ವಲ್ಲಭಭಾಯ್ ಪಟೇಲರ ಜನ್ಮದಿನಾಚರಣೆ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಸರ್ದಾರ್ ವಲ್ಲಭಭಾಯ್ ಪಟೇಲರ ಜನ್ಮದಿನಾಚರಣೆ

Date:

ಉಡುಪಿ, ನ.1: ಏಕತೆಯ ಹರಿಕಾರ, ದಿಟ್ಟ ನಿರ್ಧಾರಗಳಿಂದ ಉಕ್ಕಿನ ಮನುಷ್ಯನೆಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭಬಾಯಿ ಪಟೇಲರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಮತ್ತು ಐಕ್ಯತೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟದ್ದರು. ಸ್ವಾತಂತ್ರ್ಯದ ನಂತರ ದೇಶವನ್ನು ಒಗ್ಗೂಡಿಸಲು ಹಾಗೂ ದೇಶದ ಏಳಿಗೆಗಾಗಿ ಪ್ರಾಮಾಣಿಕವಾಗಿ ದುಡಿದು ಭಾರತೀಯರಿಗೆ ಆದರ್ಶಪ್ರಾಯವಾಗಿದ್ದಾರೆ. ಪಟೇಲರ ತತ್ವ-ಆದರ್ಶಗಳು ಇಂದಿಗೂ ಜೀವಂತವಾಗಿದೆ ಎಂದು ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಹೇಳಿದರು. ಅವರು ಗುರುವಾರ ನೆಹರೂ ಯುವ ಕೇಂದ್ರ ಉಡುಪಿ ಮತ್ತು ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಆಶ್ರಯದಲ್ಲಿ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ ಜರಗಿದ ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಸರ್ದಾರ್ ವಲ್ಲಭಭಾಯಿ ಪಟೇಲರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿದರು.

ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಪೂರ್ವಾಧ್ಯಕ್ಷರಾದ ಸುರೇಶ್ ಕಾಸ್ರಬೈಲು, ರಾಜೇಶ್ ಕೋಟ್ಯಾನ್, ಪ್ರಶಾಂತ್ ಪೂಜಾರಿ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಜೊತೆ ಕಾರ್ಯದರ್ಶಿ ಅನ್ನಪೂರ್ಣ ಕಾಮತ್, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಸದಸ್ಯರಾದ ಮಂಜುನಾಥ ಆಚಾರ್ಯ, ಹರೀಶ್ ಪೂಜಾರಿ, ಸುರೇಶ್ ಅಬ್ಬನಡ್ಕ, ಶಾಂತರಾಮ್ ಕುಲಾಲ್, ಪ್ರದೀಪ್ ಸುವರ್ಣ, ಲಲಿತಾ ಆಚಾರ್ಯ, ವೀಣಾ ಪೂಜಾರಿ, ಪುಷ್ಪ ಕುಲಾಲ್, ವೀಣಾ ಆಚಾರ್ಯ, ಸುಲೋಚನಾ ಕೋಟ್ಯಾನ್ ಮೊದಲಾದವರು ಉಪಸ್ಥಿತಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!