ನವದೆಹಲಿ, ನ.6: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯನ್ನು ಸರ್ಕಾರ ಅನುಮೋದಿಸಿದೆ. ಕ್ಯಾಬಿನೆಟ್ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಬುಧವಾರ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು, ಉನ್ನತ ಶಿಕ್ಷಣವನ್ನು ಮುಂದುವರಿಸಲು ವಿದ್ಯಾರ್ಥಿಗಳು ಮೇಲಾಧಾರ ರಹಿತ ಮತ್ತು ಜಾಮೀನು ರಹಿತ ಸಾಲವನ್ನು ಪಡೆಯಲು ಅರ್ಹರಾಗಿರುತ್ತಾರೆ. ಯುಜನರು ಗುಣಮಟ್ಟದ ಉನ್ನತ ಶಿಕ್ಷಣವನ್ನು ಯಾವುದೇ ಅಡೆತಡೆಗಳಿಲ್ಲದೇ ಪಡೆಯಲು ಈ ಯೋಜನೆಯನ್ನು ಪರಿಚಯಿಸಲಾಗಿದೆ ಎಂದು ಅವರು ಹೇಳಿದರು. ಯೋಜನೆಯ ಪ್ರಯೋಜನವನ್ನು ಪಡೆಯಲು, ವಿದ್ಯಾರ್ಥಿಗಳು ಏಕೀಕೃತ ಪೋರ್ಟಲ್ ಪಿಎಂ ವಿದ್ಯಾಲಕ್ಷ್ಮಿಯಲ್ಲಿ ಶಿಕ್ಷಣ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದು.
ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು
ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು
Date: