ಉಡುಪಿ, ನ.7: ಪದವಿಪೂರ್ವ ಶಿಕ್ಷಣ ಇಲಾಖೆ ಕಾರವಾರ, ಉಪನಿರ್ದೇಶಕರ ಕಚೇರಿ ಮತ್ತು ಶಿರಸಿ ಮಾರಿಕಾಂಬಾ ಸರ್ಕಾರಿ ಪ.ಪೂ. ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ನಿಖಿಲ್ ವಿಕ್ರಮ್ ಕೆ.ಎಸ್. ಇವರು ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿ ಕೊಲ್ಕತ್ತದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚದುರಂಗ ಸ್ಪರ್ಧೆಗೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಇವರು ಡಾ. ಕೆ ಶ್ರೀಧರ ಪ್ರಸಾದ್ ಕಡೂರ್ ಮತ್ತು ವೀಣಾ ಎಸ್ ಪ್ರಸಾದ್ ದಂಪತಿಗಳ ಸುಪುತ್ರ. ಸಂಸ್ಥೆಗೆ ಕೀರ್ತಿ ತಂದಿರುವ ಈ ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಬೋಧಕ, ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
ಉಡುಪಿ ಜ್ಞಾನಸುಧಾ: ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ
ಉಡುಪಿ ಜ್ಞಾನಸುಧಾ: ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ
Date: