Friday, November 8, 2024
Friday, November 8, 2024

ಗೋ ಗ್ರೀನ್ – 2.0 ಜಾಗೃತಿ ಜಾಥಾ

ಗೋ ಗ್ರೀನ್ – 2.0 ಜಾಗೃತಿ ಜಾಥಾ

Date:

ಕುಂದಾಪುರ, ನ.8: ಡಾ. ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ ಇಲ್ಲಿನ ಎನ್.ಸಿ.ಸಿ. ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ಮತ್ತು ಮಣ್ಣಿನ ಸಂರಕ್ಷಣೆ ಹಾಗೂ ಗಿಡಗಳನ್ನು ನೆಡುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಕುಂದಾಪುರದ ವಿವಿಧ ಭಾಗಗಳಾದ ಟೋಟಲ್ ಗ್ಯಾಸ್ ಬಂಕ್, ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು, ಜ್ಯೂನಿಯರ್ ಕಾಲೇಜು, ತಹಶೀಲ್ದಾರ ಕಛೇರಿ, ಪೊಲೀಸ್ ಸ್ಟೇಶನ್, ಸಂಚಾರಿ ಪೊಲೀಸ್ ಸ್ಟೇಶನ್, ಪುರಸಭೆ, ಸೈಂಟ್ ಮೇರಿಸ್ ಪದವಿಪೂರ್ವ
ಕಾಲೇಜು, ಬ್ಯಾರೀಸ್ ಗ್ರೂಪ್ ಆಫ್ ಇನ್ಸಿಟ್ಯೂಷನ್, ಕೋಡಿ ಇಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ, ಪರಿಸರ ಸಂರಕ್ಷಣೆ ಮಹತ್ವವನ್ನು ತಿಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಎನ್.ಸಿ.ಸಿ. ಅಧಿಕಾರಿಗಳಾದ ಲೆಫ್ಟಿನೆಂಟ್ ಹರೀಶ್ ಬಿ., ಶರತ್ ಕುಮಾರ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಎನ್.ಸಿ.ಸಿ. ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ: ವಿವಿಧ ಆಟೋಟ ಸ್ಪರ್ಧೆ

ಉಡುಪಿ, ನ.8: ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ- 2024 ಇದರ ಅಂಗವಾಗಿ ಬುಧವಾರ...

ಗ್ರಾಮ ಪಂಚಾಯತ್ ಉಪಚುನಾವಣೆ: ವೇತನ ಸಹಿತ ರಜೆ

ಉಡುಪಿ, ನ.8: ರಾಜ್ಯ ಚುನಾವಣಾ ಆಯೋಗವು ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ...

ನಾಗಸಂದ್ರ – ಮಾದಾವರ ನಡುವೆ ನಮ್ಮ ಮೆಟ್ರೋ ರೈಲು ಸಂಚಾರ ಆರಂಭ

ಬೆಂಗಳೂರು, ನ.8: ನಾಗಸಂದ್ರ - ಮಾದಾವರ ನಡುವೆ ನಮ್ಮ ಮೆಟ್ರೋ ರೈಲು...

ಕಾರ್ಕಳ ತಾಲೂಕು ಮಟ್ಟದ ಪಿಂಚಣಿ ಅದಾಲತ್

ಉಡುಪಿ, ನ.8: ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ,...
error: Content is protected !!