Saturday, January 18, 2025
Saturday, January 18, 2025

ನ.10: ಶ್ರೀ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನದ 7ನೇ ವರ್ಷದ ವಾರ್ಷಿಕೋತ್ಸವ

ನ.10: ಶ್ರೀ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನದ 7ನೇ ವರ್ಷದ ವಾರ್ಷಿಕೋತ್ಸವ

Date:

ಉಡುಪಿ, ನ.8: ಶ್ರೀ ಸೋದೆ ವಾದಿರಾಜ ಮಠ, ಉಡುಪಿ ಇವರ ಆಶ್ರಯದಲ್ಲಿ ಶ್ರೀ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ತೆಂಕುತಿಟ್ಟು ಯಕ್ಷಗಾನ ಅಧ್ಯಯನ ಕೇಂದ್ರ ಇದರ 7ನೇ ವರ್ಷದ ವಾರ್ಷಿಕೋತ್ಸವವು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆದಿತ್ಯವಾರ 10 ನವೆಂಬರ್ 2024ರ ಮದ್ಯಾಹ್ನ ಗಂಟೆ 3:30 ರಿಂದ ಜರುಗಲಿದೆ. ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಶ್ರೀ ಸೋದೆ ವಾದಿರಾಜ ಮಠ, ಉಡುಪಿ ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೇದಮೂರ್ತಿ ಪಿ ವೆಂಕಟರಮಣ ಐತಾಳ್, ನಿವೃತ್ತ ಆದಾಯ ತೆರಿಗೆ ಅಧಿಕಾರಿಗಳು ಹಾಗೂ ಹವ್ಯಾಸಿ ಭಾಗವತರು, ಶ್ರೀ ಪಣಂಬೂರು ವಾಸುದೇವ ಐತಾಳ, ಕಲಾಪೋಷಕ, ಪ್ರಧಾನ ಸಂಚಾಲಕ, ಯಕ್ಷಧ್ರುವ ಯಕ್ಷಶಿಕ್ಷಣ ಹಾಗೂ ಸ್ಥಾಪಕ ಅಧ್ಯಕ್ಷ ವಿದ್ಯಾಗಮ ಟ್ರಸ್ಟ್ ಇವರು ಪಾಲ್ಗೊಳ್ಳಲಿದ್ದಾರೆ. ಯಕ್ಷಗುರು ರಾಕೇಶ್ ರೈ ಅಡ್ಕ ಮತ್ತು ಶ್ರೀ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನದ ಸಂಯೋಜಕರಾದ ಗೋಪಿಕಾ ಮಯ್ಯ ಉಪಸ್ಥಿತರಿರುವರು.

ಯಕ್ಷಗುರು ರಾಕೇಶ್ ರೈ ಅಡ್ಕ ಇವರ ಶಿಷ್ಯಂದಿರಿಂದ ಮದ್ಯಾಹ್ನ ಗಂಟೆ 3:30 ರಿಂದ ‘ತ್ರಿಜನ್ಮ ಮೋಕ್ಷ’ ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನ ಇರುವುದು. ಈ ಕಾರ್ಯಕ್ರಮಕ್ಕೆ ಎಲ್ಲಾ ಕಲಾಭಿಮಾನಿಗಳಿಗೆ ಆದರದ ಸ್ವಾಗತವನ್ನು ಪ್ರತಿಷ್ಠಾನದ ಸಂಯೋಜಕರು ವಿದ್ಯಾರ್ಥಿಗಳು ಮತ್ತು ಪೋಷಕರು ಬಯಸಿದ್ದಾರೆ.

ಶ್ರೀ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನವು 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತೆಂಕುತಿಟ್ಟು ಯಕ್ಷಗಾನ ತರಬೇತಿಯನ್ನು ಸಮರ್ಥ ಗುರು ರಾಕೇಶ್ ರೈ ಅಡ್ಕ ಇವರ ಮೂಲಕ ಉಚಿತವಾಗಿ ನೀಡುತ್ತಿದೆ. ಪ್ರತಿಷ್ಠಾನದ ಈ ಸತ್ಕಾರ್ಯಕ್ಕೆ ಸೋದೆ ಮಠದ ಶ್ರೀ ಶ್ರೀ ವಿಶ್ವವಲ್ಲಭ ಶ್ರೀಪಾದರು ತಮ್ಮ ಮಠದಲ್ಲಿ ಸ್ಥಳಾವಕಾಶವನ್ನು ಕಲ್ಪಿಸಿಕೊಟ್ಟು ಈ ಕಾರ್ಯವನ್ನು ಪೋಷಿಸುತ್ತಾ ಬಹುವಾಗಿ ಅನುಗ್ರಹಿಸುತ್ತಿದ್ದಾರೆ. ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪ್ರತಿಷ್ಠಾನದ ವತಿಯಿಂದ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ: ಸಂಖ್ಯೆ 9844212104 / 9663424981/9845150802

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...

ಗಾನ ಸಂಭ್ರಮ 2025 ಸಂಪನ್ನ

ಕುಂದಾಪುರ, ಜ.18: ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿಯ ಸುವರ್ಣ...
error: Content is protected !!