Friday, November 22, 2024
Friday, November 22, 2024

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

Date:

ಉಡುಪಿ, ನ.13: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರವನ್ನು ಪ್ರಾರಂಭಿಸಲು ಸೊಸೈಟಿ ರಿಜಿಸ್ಟ್ರೇಷನ್ ಆ್ಯಕ್ಟ್/ ಟ್ರಸ್ಟ್ ಆ್ಯಕ್ಟ್ ಅಡಿ ನೋಂದಣಿಯಾದ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯು ನೋಂದಣಿ ಹೊಂದಿ ಕನಿಷ್ಠ 02 ವರ್ಷಗಳಾಗಿರಬೇಕು, ಹಗಲು ಯೋಗಕ್ಷೇಮ ಕೇಂದ್ರದಲ್ಲಿ ಸರ್ಕಾರದ ಆದೇಶಗಳಲ್ಲಿ ನಿಗದಿಪಡಿಸಲಾದ ವಿದ್ಯಾರ್ಹತೆಯುಳ್ಳ ಸೇವಾ ಮನೋಭಾವದ ಸಿಬ್ಬಂದಿಗಳನ್ನು, ಹಿರಿಯ ನಾಗರಿಕರ ಅವಶ್ಯಕತೆಗಳನ್ನು ಪೂರೈಸುವ ಮೂಲಭೂತ ಸೌಕರ್ಯ ಒದಗಿಸುವ ಸೇವಾ ಮನೋಭಾವ ಹೊಂದಿರುವ ಆಡಳಿತ ಮಂಡಳಿಯನ್ನು ಹಾಗೂ ಸಂಸ್ಥೆಯು ಆಡಳಿತ ಮಂಡಳಿಯ ಕರ್ತವ್ಯಗಳನ್ನು ಮತ್ತು ಜವಾಬ್ದಾರಿಗಳನ್ನು ಸ್ಪಷ್ಟ ಹಾಗೂ ಖಚಿತವಾಗಿರುವ ಉಪನಿಯನಗಳನ್ನು ಹೊಂದಿರಬೇಕು.

ಸಂಸ್ಥೆಯು ಆರ್ಥಿಕ ಸ್ಥಿತಿಗತಿಯು ಸಧೃಡವಾಗಿರಬೇಕು. ಯಾವುದೇ ಓರ್ವ ವ್ಯಕ್ತಿ ಹಾಗೂ ಜನಾಂಗದ ಲಾಭಕ್ಕಾಗಿ ಸಂಸ್ಥೆಯನ್ನು ನಡೆಸುತ್ತಿರಬಾರದು ಹಾಗೂ ಯಾವುದೇ ಜಾತಿ, ಪಂಥ, ಮತ ಮತ್ತು ಭಾಷೆಗಳನ್ನು ಪರಿಗಣಿಸದೇ ಎಲ್ಲರಿಗೂ ಸೌಲಭ್ಯ ಒದಗಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಛೇರಿ, ತಳ ಅಂತಸ್ತು, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...
error: Content is protected !!