Saturday, November 23, 2024
Saturday, November 23, 2024

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ಲೋಕ ಕಲ್ಯಾಣಾರ್ಥಕ್ಕಾಗಿ ರುದ್ರಯಾಗ

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ಲೋಕ ಕಲ್ಯಾಣಾರ್ಥಕ್ಕಾಗಿ ರುದ್ರಯಾಗ

Date:

ಉಡುಪಿ, ನ.13: ಬನ್ನಂಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಶ್ರೀ ದೇವರ ಸನ್ನಿಧಿಯಲ್ಲಿ ಲೋಕ ಕಲ್ಯಾಣಾರ್ಥಕ್ಕಾಗಿ ರುದ್ರಯಾಗ ನಡೆಯಿತು. ದೇವಳದ ತಂತ್ರಿಗಳಾದ ಶಶಿಕಾಂತ್ ತಂತ್ರಿಗಳ ಮಾರ್ಗದರ್ಶನದಲ್ಲಿ ರುದ್ರಯಾಗದ ಧಾರ್ಮಿಕ ಪೂಜಾ ವಿಧಾನಗಳನ್ನು ಅರ್ಚಕ ವೃಂದದವರು ನಡೆಸಿಕೊಟ್ಟರು. ಸಾಮೂಹಿಕ ಪ್ರಾರ್ಥನೆ, ಶತ ರುದ್ರಾಭಿಷೇಕ, ನವಕ ಪ್ರಧಾನ, ಭಜನಾ ಕಾರ್ಯಕ್ರಮ, ಶ್ರೀ ದೇವರಿಗೆ ವಿಶೇಷ ಅಲಂಕಾರ, ಯಾಗದ ಪುರ್ಣಾಹುತಿ ಬಳಿಕ ಮಹಾಪೂಜೆ, ಪಲ್ಲಪೂಜೆ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ರಾಮ್ ಬನ್ನಂಜೆ, ದೇವಳದ ಅರ್ಚಕರಾದ ವಾಸುದೇವ ಉಪಧ್ಯಾಯ, ನಗರಸಭಾ ಸದಸ್ಯರಾದ ಟಿಜಿ ಹೆಗ್ಡೆ, ಸವಿತಾ ಹರೀಶ್ ರಾಂ, ಸಮಿತಿಯ ಸದಸ್ಯರಾದ ವಿಠಲ್ ಶೆಟ್ಟಿ, ಭುಜಂಗ ಶೆಟ್ಟಿ, ಸುಧಾಕರ್ ಮಲ್ಯ, ಸುರೇಶ ಶೇರಿಗಾರ, ದಯಾನಂದ ಕಲ್ಮಾಡಿ, ಅನುಪಮಾ ಆನಂದ ಸುವರ್ಣ, ಮಾಧವ ಬನ್ನಂಜೆ, ರವಿರಾಜ್ ಭಟ್, ಪ್ರಭಾಕರ್ ಶೆಟ್ಟಿ, ಅರುಣ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!