Friday, November 15, 2024
Friday, November 15, 2024

ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಶಾಸಕ ಯಶ್ಪಾಲ್ ಸುವರ್ಣ, ಜಿ. ಪಂ. ಸಿ.ಇ.ಒ. ಭೇಟಿ

ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಶಾಸಕ ಯಶ್ಪಾಲ್ ಸುವರ್ಣ, ಜಿ. ಪಂ. ಸಿ.ಇ.ಒ. ಭೇಟಿ

Date:

ಉಡುಪಿ, ನ.15: ಉಡುಪಿ ನಗರದ ಹೃದಯ ಭಾಗದಲ್ಲಿರುವ ಜಿಲ್ಲೆಯ ಏಕೈಕ ಬಾಲಕಿಯರ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ, ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದ ವರ್ಷದಿಂದ ವರ್ಷಕ್ಕೆ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿತ್ತಿರುವ ಹಿನ್ನೆಲೆಯಲ್ಲಿ ಮೂಲಸೌಕರ್ಯ ಕೊರತೆಯಿಂದ ಸಮಸ್ಯೆ ಉಂಟಾಗುತ್ತಿದೆ. ಶಾಲಾ ಆವರಣದಲ್ಲಿ ಡಯಟ್ ಶಾಲೆ ಕೂಡಾ ಕಾರ್ಯನಿರ್ವಹಿಸುತ್ತಿದ್ದು, ಹಳೆಯ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದೆ. ಅವೈಜ್ಞಾನಿಕ ರೀತಿಯಲ್ಲಿ ಕಟ್ಟಡಗಳ ನಿರ್ಮಾಣದಿಂದ ಸ್ಥಳಾವಕಾಶ ಕೊರತೆ ಉಂಟಾಗಿದೆ. ಈ ಬಗ್ಗೆ ವೈಜ್ಞಾನಿಕ ರೀತಿಯಲ್ಲಿ ನೀಲ ನಕಾಶೆ ರಚಿಸಿ ಹಳೆ ಕಟ್ಟಡಗಳನ್ನು ತೆರವುಗೊಳಿಸಿ, ಸರ್ಕಾರಡ ಅನುದಾನ ಹಾಗೂ ದಾನಿಗಳ ಸಹಕಾರದಿಂದ ಮೂಲ ಸೌಕರ್ಯಗಳನ್ನು ರೂಪಿಸಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಬೇಕಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ರವರು ಕಾಲೇಜಿನ ಮೂಲ ಸೌಕರ್ಯ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅಗತ್ಯವಿರುವ ಕಾಲೇಜು ತರಗತಿ ಕೊಠಡಿ, ಪ್ರಯೋಗಾಲಯ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಪೂರಕ ಮೈದಾನ ಮೊದಲಾದ ಬೇಡಿಕೆಗಳ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಂದ ಮಾಹಿತಿ ಪಡೆದರು.

ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಕಾಲೇಜು ಅಭಿವೃದ್ದಿ ಸಮಿತಿಯ ನಿರುಪಮಾ ಪ್ರಸಾದ್ ಶೆಟ್ಟಿ, ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲೆಯ ವಿವಿಧೆಡೆ ಮಳೆಯ ಅಬ್ಬರ

ಉಡುಪಿ, ನ.15: ಉಡುಪಿ ಜಿಲ್ಲೆಯ ವಿವಿಧೆಡೆ ಗುರುವಾರ ಮಧ್ಯಾಹ್ನದಿಂದ ಸಂಜೆಯವರೆಗೆ ಬಿಟ್ಟು...

ಅಪರೂಪದ ಲಿಂಗ ಮುದ್ರೆ ಕಲ್ಲು ಪತ್ತೆ

ಉಡುಪಿ, ನ.15: ಇತಿಹಾಸ ಮತ್ತು ಪುರಾತತ್ವ ಶಾಸ್ತ್ರಜ್ಞ ಹಾಗೂ ಶಿವಮೊಗ್ಗದ ಮಲೆನಾಡು...

ಗಣಿತ ಎಂದರೆ ಸತ್ಯ, ಅದುವೇ ಜೀವನ ಆಗಲಿ: ಡಾ. ಸುಧಾಕರ್ ಶೆಟ್ಟಿ

ಕಾರ್ಕಳ, ನ.15: ಗಣಿತವೇ ಸತ್ಯ, ಅದು ತರ್ಕಕ್ಕೆ ನಿಕಶವಾದದ್ದು. ಗಣಿತವೇ ಬದುಕು....

ತೆಂಕನಿಡಿಯೂರು ಕಾಲೇಜಿನಲ್ಲಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

ಉಡುಪಿ, ನ.15: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ...
error: Content is protected !!