Saturday, November 16, 2024
Saturday, November 16, 2024

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನ ಸಂಪರ್ಕ ಸಭೆ

Date:

ಉಡುಪಿ, ನ.15: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ನವೆಂಬರ್ 21 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕುಂದಾಪುರ ತಾಲೂಕು ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯವಂತ ಹವ್ಯಾಸಗಳನ್ನು ರೂಢಿಸಿಕೊಳ್ಳಿ: ಡಾ. ಪಿ.ವಿ. ಭಂಡಾರಿ

ಬ್ರಹ್ಮಾವರ, ನ.15: ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ...

ನವಜಾತ ಶಿಶುವಿನ ಆರೈಕೆಗೆ ತಾಯಂದಿರು ಹೆಚ್ಚಿನ ಆದ್ಯತೆ ನೀಡಿ: ಜಿಲ್ಲಾಧಿಕಾರಿ

ಉಡುಪಿ, ನ.15: ನವಜಾತ ಶಿಶುವಿನ ಅವಧಿಯು ಮಕ್ಕಳ ಜೀವನದಲ್ಲಿ ಅತ್ಯಂತ ನಿರ್ಣಾಯಕ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಸ್ವಾಗತಾರ್ಹ ವಾತಾವರಣ ಕಲ್ಪಿಸಿ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ, ನ.15: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ ಅನುಕೂಲತೆಗಳನ್ನು ಹೆಚ್ಚಿಸುವ...

ಉಡುಪಿ ಜಿಲ್ಲೆಯ ವಿವಿಧೆಡೆ ಮಳೆಯ ಅಬ್ಬರ

ಉಡುಪಿ, ನ.15: ಉಡುಪಿ ಜಿಲ್ಲೆಯ ವಿವಿಧೆಡೆ ಗುರುವಾರ ಮಧ್ಯಾಹ್ನದಿಂದ ಸಂಜೆಯವರೆಗೆ ಬಿಟ್ಟು...
error: Content is protected !!