Tuesday, November 19, 2024
Tuesday, November 19, 2024

ಬ್ರಹ್ಮಾವರ ಗಾಂಧಿ ಮೈದಾನಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಬ್ರಹ್ಮಾವರ ಗಾಂಧಿ ಮೈದಾನಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Date:

ಉಡುಪಿ, ನ.19: ಬ್ರಹ್ಮಾವರ ಗಾಂಧಿ ಮೈದಾನದ ಅವ್ಯವಸ್ಥೆ ಹಾಗೂ ಅಸಮರ್ಪಕ ನಿರ್ವಹಣೆಯಿಂದ ಕ್ರೀಡಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ತೊಂದರೆ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಬ್ರಹ್ಮಾವರ ಕೇಂದ್ರ ಭಾಗದಲ್ಲಿರುವ ಗಾಂಧಿ ಮೈದಾನವನ್ನು ಸಾರ್ವಜನಿಕರ ಹಾಗೂ ಕ್ರೀಡಾಪ್ರೇಮಿಗಳ ಬೇಡಿಕೆಯಂತೆ ವಿವಿಧ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾಗಿರುವ ರೀತಿಯಲ್ಲಿ ಮಾಸ್ಟರ್ ಪ್ಲ್ಯಾನ್ ರೂಪಿಸಿ ಹಂತ ಹಂತವಾಗಿ ಮೈದಾನ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು.

ವಾಕಿಂಗ್ ಟ್ರ್ಯಾಕ್, ವಾಲಿಬಾಲ್ ಮೈದಾನ, ಕಬಡ್ಡಿ ಮೈದಾನ, ಶೌಚಾಲಯ, ಬಯಲು ರಂಗಮಂದಿರ, ಕ್ರಿಕೆಟ್ ಮೈದಾನ ಸಹಿತ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪೂರಕವಾಗಿರುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರದ ಅನುದಾನ ಬಳಸಿ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗುವುದು ಎಂದರು.

ಈಗಾಗಲೇ ಗಾಂಧಿ ಮೈದಾನದಲ್ಲಿ ಈ ಹಿಂದೆ ನಡೆದಿರುವ ಕಾಮಗಾರಿಗಳ ಬಗ್ಗೆ ನಿರ್ಮಿತಿ ಕೇಂದ್ರದ ಇಂಜಿನಿಯರ್ ರಿಂದ ಮಾಹಿತಿ ಪಡೆದ ಶಾಸಕರು ಸ್ಥಳೀಯರ ಅಭಿಪ್ರಾಯದಂತೆ ಮಾಸ್ಟರ್ ಪ್ಲ್ಯಾನ್ ಮಾಡುವಂತೆ ಸೂಚನೆ ನೀಡಿದರು.

ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾದ ರಾಜೀವ್ ಕುಲಾಲ್, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿತ್ಯಾನಂದ, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ, ಚಾಂತಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರೇಮಾ, ಸ್ಥಳೀಯ ಮುಖಂಡರಾದ ರಾಜೇಶ್ ಶೆಟ್ಟಿ ಬಿರ್ತಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ನಿಶಾನ್ ರೈ, ಸತ್ಯರಾಜ್, ಎಸ್. ನಾರಾಯಣ, ಅರ್ಜುನ್ ಪ್ರಭು, ಭರತ್ ಶೆಟ್ಟಿ, ದೇವಾನಂದ, ಸಚಿನ್ ಪೂಜಾರಿ, ದಿನೇಶ್, ಸಂತೋಷ್ ಜತ್ತನ್ ಹೇರೂರು, ವಸಂತ ಗಿಳಿಯಾರ್, ಚಂದ್ರಶೇಖರ್ ಶೆಟ್ಟಿ, ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃಧ್ದಿ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ಲಾಂಟೇಶನ್ ಬೆಳೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ನ.19: ಜಿಲ್ಲೆಯಲ್ಲಿ 2005 ಜನವರಿ 01 ರ ಪೂರ್ವದಲ್ಲಿ ಸರ್ಕಾರಿ...

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ: ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

ಉಡುಪಿ, ನ.19: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ನಿಮಿತ್ತ...

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ: ವೇಳಾಪಟ್ಟಿ ಪ್ರಕಟ

ಉಡುಪಿ, ನ.19: ರಾಜ್ಯ ಚುನಾವಣಾ ಆಯೋಗವು ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ...

ಕಾರ್ಕಳ ಜ್ಞಾನಸುಧಾ: ವಾರ್ಷಿಕ ಕ್ರೀಡಾಕೂಟ

ಕಾರ್ಕಳ. ನ.19: ವಿದ್ಯಾರ್ಥಿಯ ಸಾಧನೆಯ ಹಿಂದೆ ಗುರುಗಳ ಪಾತ್ರ ಮಹತ್ವದ್ದು. ಅಂತಹ...
error: Content is protected !!