Monday, November 25, 2024
Monday, November 25, 2024

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

Date:

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ ಅಂಗವಾಗಿ ರಾಜ್ಯಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಕೃಷಿ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದಲ್ಲಿ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಡಿಸೆಂಬರ್ 12 ರಂದು ನಗರದ ಮಣಿಪಾಲ ರಜತಾದ್ರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ, ತಯಾರಿಸುವ ಖಾದ್ಯ, ಬೇಕಾಗುವ ಸಾಮಾಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 7 ರ ಒಳಗಾಗಿ ಇ-ಮೇಲ್ ವಿಳಾಸ [email protected] ಅಥವಾ ಖುದ್ದಾಗಿ / ಪೋಸ್ಟ್ ಮೂಲಕ ಜಂಟಿ ಕೃಷಿ ನಿರ್ದೇಶಕರ ಕಛೇರಿ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!