Saturday, November 23, 2024
Saturday, November 23, 2024

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

Date:

ಉಡುಪಿ, ನ.22: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಾಗೂ ಉದ್ದು ಮತ್ತು ನೆಲಗಡಲೆ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು 2024-25 ಯೋಜನೆಯ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ. ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಅಧಿಸೂಚಿತ ಬೆಳೆಗಳ ವಿವರ ಹೀಗಿದೆ: ಭತ್ತದ ಬೆಳೆಗೆ ಉಡುಪಿ ಹಾಗೂ ಕಾಪು ತಾಲೂಕಿನ ತಲಾ 2 ಗ್ರಾ.ಪಂಚಾಯತ್, ಬ್ರಹ್ಮಾವರ ತಾಲೂಕಿನ 7 ಗ್ರಾ.ಪಂಚಾಯತ್, ಕುಂದಾಪುರ ತಾಲೂಕಿನ 13 ಗ್ರಾ.ಪಂಚಾಯತ್, ಬೈಂದೂರು ತಾಲೂಕಿನ 1 ಗ್ರಾ.ಪಂ, ಕಾರ್ಕಳ ತಾಲೂಕಿನ 19 ಗ್ರಾ.ಪಂಚಾಯತ್ ಹಾಗೂ ಹೆಬ್ರಿ ತಾಲೂಕಿನ 3 ಗ್ರಾ.ಪಂಚಾಯತ್ ಸೇರಿದಂತೆ ಒಟ್ಟು 47 ಗ್ರಾಮ ಪಂಚಾಯತ್‌ಗಳನ್ನು ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದ್ದು, ವಿಮಾ ಮೊತ್ತ ಪ್ರತೀ ಹೆಕ್ಟೇರ್‌ಗೆ 93,250 ರೂ.ಗೆ, ವಿಮಾ ಕಂತಿನ ದರ ಪ್ರತೀ ಹೆ.ಗೆ 1,398.75 ರೂ.ಗಳಾಗಿದ್ದು, ನೋಂದಣಿಗೆ ಡಿಸೆಂಬರ್ 31 ಕೊನೆಯ ದಿನ. ಮಳೆಯಾಶ್ರಿತ ಉದ್ದು ಬೆಳೆಗೆ ಬ್ರಹ್ಮಾವರ, ಕಾಪು, ಕೋಟ, ಉಡುಪಿ, ಕುಂದಾಪುರ, ಬೈಂದೂರು ಮತ್ತು ವಂಡ್ಸೆ ಸೇರಿದಂತೆ ಒಟ್ಟು 7 ಹೋಬಳಿಗಳನ್ನು ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದ್ದು, ವಿಮಾ ಮೊತ್ತ ಪ್ರತಿ ಹೆ.ಗೆ 32,750 ರೂ. ಗೆ ವಿಮಾ ಕಂತಿನ ದರ 491.25 ರೂ ಗಳಾಗಿದ್ದು, ನೋಂದಣಿಗೆ ನವೆಂಬರ್ 30 ಕೊನೆಯ ದಿನ. ಮಳೆಯಾಶ್ರಿತ ನೆಲಗಡಲೆ ಬೆಳೆಗೆ ಕುಂದಾಪುರ, ಬೈಂದೂರು ಹಾಗೂ ಕೋಟಾ ಸೇರಿದಂತೆ ಒಟ್ಟು 3 ಹೋಬಳಿಗಳನ್ನು ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದ್ದು, ವಿಮಾ ಮೊತ್ತ ಪ್ರತಿ ಹೆ.ಗೆ 54,500 ರೂ.ಗೆ ವಿಮಾ ಕಂತಿನ ದರ ಪ್ರತಿ ಹೆ.ಗೆ 817.50 ರೂ. ನಿಗಧಿಪಡಿಸಲಾಗಿದ್ದು, ನೋಂದಣಿಗೆ ಡಿಸೆಂಬರ್ 31 ಕೊನೆಯ ದಿನವಾಗಿದೆ.

ರೈತರು ಪಹಣಿ ಪತ್ರ, ಖಾತೆ/ ಪಾಸ್‌ಪುಸ್ತಕ, ಆಧಾರ್ ಸಂಖ್ಯೆ, ಕಂದಾಯ ರಸೀದಿಗಳನ್ನು ಒದಗಿಸಿ, ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಬೆಳೆ ವಿಮಾ ಯೋಜನೆಯಿಂದ ರೈತರಿಗಾಗುವ ಪ್ರಯೋಜನಗಳು : ಮಳೆ ಅಭಾವ ಅಥವಾ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಅಧಿಸೂಚಿತ ಘಟಕದಲ್ಲಿ ಶೇ. 75 ರಷ್ಟು ಬಿತ್ತನೆಯಾಗದಿದ್ದಲ್ಲಿ ವಿಮೆ ಮಾಡಿಸಿದ ರೈತರಿಗೆ ವಿಮಾ ಮೊತ್ತದ ಶೇ. 25 ರಷ್ಟು ಪರಿಹಾರ ನೀಡಲಾಗುವುದು. ಅಧಿಸೂಚಿತ ಘಟಕದಲ್ಲಿ ಸಂಭವಿಸುವ ಹವಾಮಾನ ವೈಪರೀತ್ಯಗಳಾದ ಹೆಚ್ಚಿನ ಮಳೆ, ನೆರೆ/ ಪ್ರವಾಹದಿಂದ ಬೆಳೆ ಮುಳುಗಡೆ, ದೀರ್ಘ ಕಾಲ ತೇವಾಂಶ ಕೊರತೆ, ತೀವ್ರ ಬರಗಾಲ ಮುಂತಾದವುಗಳಿಂದ ಬಿತ್ತನೆಯಾದ 1 ತಿಂಗಳಿನಿಂದ ಕಟಾವಿನ 15 ದಿನ ಪೂರ್ವದವರೆಗಿನ ಬೆಳೆಯಲ್ಲಿ ಬೆಳೆ ನಷ್ಟವಾಗಿ ನಿರೀಕ್ಷಿತ ಇಳುವರಿಯು, ಪ್ರಾರಂಭಿಕ ಇಳುವರಿಯ ಶೇ.50ಕ್ಕಿಂತ ಕಡಿಮೆ ಇದ್ದಲ್ಲಿ ಅಥವಾ ಬೆಳೆ ನಷ್ಟ ಕಂಡುಬಂದಲ್ಲಿ ಮುಂಚಿತವಾಗಿ ವಿಮೆ ಮಾಡಿದ ರೈತರಿಗೆ ಶೇ.25 ರಷ್ಟು ಬೆಳೆ ನಷ್ಟ ಪರಿಹಾರ ದೊರೆಯಲಿದೆ. ಬೆಳೆ ಕಟಾವಿನ ವಾಸ್ತವಿಕ ಇಳುವರಿ ಆಧಾರದ ಮೇಲೆ ಅಂತಿಮ ಬೆಳೆ ನಷ್ಟ ಪರಿಹಾರದಲ್ಲಿ ಹೊಂದಾಣಿಕೆ.

ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ, ಮೇಘಸ್ಫೋಟ ಹಾಗೂ ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡಗಳಿಂದ ಬೆಳೆ ಹಾನಿಯಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದ್ದು, ಅಧಿಸೂಚಿಸಿದ ಘಟಕದಲ್ಲಿ ಶೇ.25 ಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಬೆಳೆ ನಷ್ಟವಾದಲ್ಲಿ ವಿಮೆಗೆ ಒಳಪಟ್ಟ ಬೆಳೆ ನಷ್ಟದ ವರದಿ ಮಾಡಿದ ರೈತರಿಗೆ ಮಾದರಿ ಸಮೀಕ್ಷೆಗೆ ಅನುಗುಣವಾಗಿ ಪರಿRegioಹಾರ ನಿಡಲಾಗುವುದು. ಕಟಾವಿನ ನಂತರದ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (ಕಟಾವು ಮಾಡಿದ 14 ದಿನಗಳ ಒಳಗೆ) ಚಂಡಮಾರುತ, ಅಕಾಲಿಕ ಮಳೆಯಿಂದ ಬೆಳೆ ನಾಶವಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದೆ. ಮೇಲಿನ ಎರಡೂ ಸಂದರ್ಭದಲ್ಲಿ ರೈತರು ವಿಮಾ ಸಂಸ್ಥೆ/ಆರ್ಥಿಕ ಸಂಸ್ಥೆ ಅಥಮಾ ಕೃಷಿ ಇಲಾಖಾ ಕಚೇರಿಗೆ 72 ಗಂಟೆಗಳ ಒಳಗಾಗಿ ಬೆಳೆ ಹಾನಿ ವಿವರದ ಮಾಹಿತಿ ಒದಗಿಸಬೇಕು. ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಕೊನೆಯ ದಿನಾಂಕದ ಒಂದು ವಾರದ ಮೊದಲು ಈ ಕುರಿತು ಮುಚ್ಚಳಿಕೆ ಪತ್ರ ನೀಡಿ ಬೆಳೆ ವಿಮೆಯಿಂದ ಕೈಬಿಡುವಂತೆ ಕೋರಬೇಕು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ಇಲಾಖೆಯ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!