Sunday, November 24, 2024
Sunday, November 24, 2024

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶನಿವಾರ ಉಪಚುನಾವಣೆಯ ಫಲಿತಾಂಶದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸತ್ಯ ಗೆದ್ದಿದೆ. ವಿರೋಧ ಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ಹೊಸ ಸ್ಪೂರ್ತಿ ತುಂಬಿದೆ.

ನಮ್ಮ ಸರ್ಕಾರದ ಸಾಧನೆಗಳನ್ನು ನಮ್ಮ ಜನ ಬೆಂಬಲಿಸುತ್ತಲೇ ಬಂದಿದ್ದಾರೆ. ನಾನು ದಂತದ ಗೋಪುರದಲ್ಲಿ ಕೂತವನಲ್ಲ, ನಿರಂತರವಾಗಿ ಜನರ ಜೊತೆ ಒಡನಾಟ ಇಟ್ಟುಕೊಂಡವನು, ನಮ್ಮ ಎಲ್ಲ ಗ್ಯಾರಂಟಿ ಯೋಜನಗಳ ಫಲಾನುಭವಿಗಳು ಖುಷಿಯಾಗಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು 136 ಸ್ಥಾನಗಳನ್ನು ನೀಡಿ ನಮ್ಮನ್ನು ಗೆಲ್ಲಿಸಿದ್ದಾರೆ. ಇನ್ನಾದರೂ ಬಿಜೆಪಿ ದ್ವೇಷದ ರಾಜಕಾರಣವನ್ನು ಕೈಬಿಟ್ಟು ರಚನಾತ್ಮಕ ವಿರೋಧಪಕ್ಷವಾಗಿ ಕೆಲಸ ಮಾಡಲಿ. ಮಾಜಿ ಪ್ರಧಾನಿ ದೇವೇಗೌಡರು ಮಾಡಿದ ಆರೋಪ ನನಗೆ ಬಹಳ ಬೇಸರ ಆಗಿದೆ. ನಾನು ಬಹಳ ವರ್ಷ ಅವರ ಜೊತೆಗೆ ಇದ್ದವನು. ಆದ್ರೂ ಕೂಡ, ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದೇ ನನ್ನ ಗುರಿ, ಸಿದ್ದರಾಮಯ್ಯನ ಅಹಂಕಾರ, ಸೊಕ್ಕು ಮುರಿತೀನಿ ಎಂದೆಲ್ಲಾ ಮಾತನಾಡಿದರು.

ನಾನು ಮಂತ್ರಿ ಆಗಿ 40 ವರ್ಷ ಆಯ್ತು. ಉಪ ಮುಖ್ಯಮಂತ್ರಿ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಯಾವತ್ತೂ ಸೊಕ್ಕು, ಅಹಂಕಾರ ಮಾಡಿಲ್ಲ. ಜನ‌ ಅವಕಾಶ ಕೊಟ್ಟಾಗ ಅಧಿಕಾರ ನಡೆಸಿದ್ದೇವೆ. ಸೋತಾಗ ಹೋರಾಟ ಮಾಡಿದ್ದೇವೆ. ವಯನಾಡ್ ನಲ್ಲಿ 4 ಲಕ್ಷಕ್ಕಿಂತ ಅಧಿಕ ಮತಗಳ ಅಂತರದಿಂದ ಜಯಗಳಿಸಿರುವ ಪ್ರಿಯಾಂಕ ಗಾಂಧಿಯವರಿಗೆ ಮತ್ತು ಕೇರಳ ಜನತೆಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...

ಕಾವ್ಯವನ್ನು ರಂಗರೂಪಕ್ಕೆ ತರುವುದು ಸಾಹಸ: ಪ್ರೊ.ಬಿ.ಎ. ವಿವೇಕ ರೈ

ಮೂಡುಬಿದಿರೆ, ನ.23: ಬರಹ ಅಥವಾ ಕಾವ್ಯವನ್ನು ರಂಗರೂಪಕ್ಕೆ ತರುವುದು ಒಂದು ಸಾಹಸ....
error: Content is protected !!