Monday, November 25, 2024
Monday, November 25, 2024

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

Date:

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು ಪ್ರೇರಣೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಮತ್ತು ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಮಕ್ಕಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಲಿವೆ. ಜಿಲ್ಲೆಯಲ್ಲಿ ಐಎಎಸ್, ಐಪಿಎಸ್ ಪರೀಕ್ಷೆ ಬರೆಯುವವರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಕನಿಷ್ಟ ಐದು ಮಂದಿಯಾದರೂ ಐಎಎಸ್, ಐಪಿಎಸ್ ಪರೀಕ್ಷೆ ಬರೆದು ತೇರ್ಗಡೆಯಾಗುವ ಛಲ ಹೊಂದಬೇಕು. ಆ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.

ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ ಅಧ್ಯಕ್ಷತೆ ವಹಿಸಿದ್ದರು. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಜನಾರ್ದನ ಕೊಡವೂರು, ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಜೆ. ಪೈ, ಜಿಲ್ಲಾ ಕಾರ್ಯದರ್ಶಿ ಆನಂದ ಟಿ. ಅಡಿಗ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಶಿಬಿರ ನಾಯಕಿ ಜ್ಯೋತಿ ಲಕ್ಷಣ್ ರಾವ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...
error: Content is protected !!