Thursday, November 28, 2024
Thursday, November 28, 2024

‘ಬಾಲ್ಯ ವಿವಾಹ ಮುಕ್ತ ಭಾರತ’ ವಿಶೇಷ ಉಪನ್ಯಾಸ ಕಾರ್ಯಕ್ರಮ

‘ಬಾಲ್ಯ ವಿವಾಹ ಮುಕ್ತ ಭಾರತ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Date:

ಬಾರಕೂರು, ನ.28: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾರಕೂರು, ಐಕ್ಯೂಎಸಿ, ಸಮಾಜಕಾರ್ಯ ವೇದಿಕೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಹಯೋಗದೊಂದಿಗೆ ಬಾಲ್ಯ ವಿವಾಹ ಮುಕ್ತ ಭಾರತ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಯೋಗೇಶ್ ಪಿ ಆರ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡಿದರು. ಪ್ರಾಂಶುಪಾಲರಾದ ಪ್ರೊ. ಭಾಸ್ಕರ್ ಶೆಟ್ಟಿ ಸಳ್ವಾಡಿ ಅಧ್ಯಕ್ಷತೆ ವಹಿಸಿದ್ದರು. ಭಾನುಮತಿ ಎಂ ಆರ್., ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಕ್ಷಣಾಧಿಕಾರಿ ಮಹೇಶ್ ದೇವಾಡಿಗ, ನ್ಯಾಯವಾದಿ ಸವಿತಾ, ಸಮಾಜಕಾರ್ಯ ವೇದಿಕೆ ಸಂಯೋಜಕರಾದ ಡಾ. ಶ್ರೀದೇವಿ ಕೆ., ಬೋಧಕ ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳಾದ ಮೇಘನಾ ಸ್ವಾಗತಿಸಿ, ಸ್ಪಂದನಾ ವಂದಿಸಿದರು. ಉದಯ್ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾರಕೂರು ಕಾಲೇಜು: ಸಂವಿಧಾನ ದಿನಾಚರಣೆ

ಬಾರಕೂರು, ನ.28: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ...

ಅಂಚೆ ಜನಸಂಪರ್ಕ ಅಭಿಯಾನ

ಉಡುಪಿ, ನ.28: ಭಾರತೀಯ ಅಂಚೆ ಇಲಾಖೆಯ ಉಡುಪಿ ವಿಭಾಗದ ವತಿಯಿಂದ ಬಡಗಬೆಟ್ಟು...

ಮೀನುಗಾರಿಕೆ ಸಚಿವ ಮಂಕಾಳ ವೈದ್ಯರೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಲ್ಪೆ ಮೀನುಗಾರರ ನಿಯೋಗದ ಸಭೆ

ಉಡುಪಿ, ನ.28: ಮಲ್ಪೆ ಮೀನುಗಾರಿಕಾ ಬಂದರಿನ ಹಲವು ಸಮಸ್ಯೆ ಹಾಗೂ ಮೀನುಗಾರಿಕೆಗೆ...

ಶಾಶ್ವತ ಚಿತ್ರ ಸಹಿತ ಅಂಚೆ ಮೊಹರು (ಪರ್ಮನೆಂಟ್ ಪಿಕ್ಟೊರಿಯಲ್ ಕ್ಯಾನ್ಸಲೇಷನ್) ಲೋಕಾರ್ಪಣೆ

ಉಡುಪಿ, ನ.28: ಭಾರತೀಯ ಅಂಚೆ ಇಲಾಖೆಯ ಅಸ್ಮಿತೆಗಳಲ್ಲಿ ಒಂದಾಗಿರುವ ಅಂಚೆ ಚೀಟಿ...
error: Content is protected !!