Sunday, January 19, 2025
Sunday, January 19, 2025

ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

Date:

ಉಡುಪಿ, ಡಿ.5: ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘವನ್ನು ತೆರೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಹೊಸದಾಗಿ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ(ನಿ) ಸ್ಥಾಪನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ ಸ್ಥಾಪನೆಯಿಂದ ಕಾರ್ಮಿಕರು, ಹೊರ ಗುತ್ತಿಗೆದಾರರು, ವಿವಿಧ ಆರ್ಥಿಕ ಲಾಭಗಳನ್ನು ಪಡೆಯಲು ಅನುಕೂಲವಾಗುವ ದರ ಜೊತೆಗೆ ಸರಕಾರದ ವಿವಿಧ ಇಲಾಖೆಗಳು ಹಾಗೂ ಇವುಗಳ ಅಧೀನದಲ್ಲಿ ಬರುವ ನಿಗಮ ಮಂಡಳಿ ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರ ಸೇವೆಗಳನ್ನು ಒದಗಿಸಲು ಅನುಕೂಲವಾಗಲಿದೆ. ಹೊರಗುತ್ತಿಗೆದಾರರ ವೇತನ ಪಾವತಿ, ಇ.ಎಸ್.ಐ, ಪಿ.ಎಫ್ ಮುಂತಾದ ಶಾಸನಾತ್ಮಕ ಸೌಲಭಗಳನ್ನು ನೌಕರರಿಗೆ ಒದಗಿಸುವ ಮೂಲಕ ಯಾವುದೇ ಸಮಸ್ಯೆಗಳಿಲ್ಲದೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬಹುದಾಗಿದೆ ಎಂದರು. ರಾಜ್ಯದಲ್ಲಿ ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಈ ರೀತಿಯ ಸಂಘಗಳನ್ನು ಸ್ಥಾಪಿಸಿ, ಸದರಿ ಸಂಘದ ಮೂಲಕ ಹೊರ ಗುತ್ತಿಗೆ ನೌಕರರನ್ನು ವಿವಿಧ ಇಲಾಖೆಗಳಿಗೆ ನಿಯೋಜಿಸಿದೆ. ಹಾಗೂ ಅವರಿಗೆ ವೇತನ ಸೇರಿದಂತೆ ಮತ್ತಿತರ ಶಾಸನಾತ್ಮಕವಾಗಿ ನೀಡಬೇಕಾದ ಸೇವೆಗಳು ಯಾವುದೇ ಸಂಸ್ಯೆಗಳಿಲ್ಲದೆ ಸರಳವಾಗಿ ನೀಡುವುದರೊಂದಿಗೆ ಯಶಸ್ವಿಯಾಗಿದೆ. ಇದನ್ನು ಈ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಬೇಕು ಎಂದರು. ಸಂಘದ ಪ್ರಾರಂಭಕ್ಕೆ ಅಗತ್ಯವಿರುವ ಕಚೇರಿ, ಸಂಘದ ಬೈಲಾ, ಅಡಕ್ ಸಮಿತಿ ಸೇರಿದಂತೆ ಮತ್ತಿತರ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಂಡು ಶೀಘ್ರದಲ್ಲಿಯೇ ಸಂಘ ಸ್ಥಾಪನೆಗೆ ಮುಂದಾಗಬೇಕು ಎಂದ ಅವರು, ಪ್ರಸ್ತುತ ಚಾಲ್ತಿಯಲಿರುವ ಕಾರ್ಮಿಕ ಇಲಾಖೆಗಳ ವಿವಿದ್ದೋದ್ದೇಶ ಸಹಕಾರ ಸಂಘಕ್ಕೆ ಜಿಲ್ಲೆಯ ತಂಡ ಭೇಟಿ ನೀಡಿ, ವೀಕ್ಷಿಸಿ ಮಾಹಿತಿ ಕಲೆ ಹಾಕಬೇಕು ಎಂದರು.

ಜಿಲೆಯಲ್ಲಿ ವಿವಿಧ ಇಲಾಖೆಗಳಲ್ಲಿ 2080 ಕ್ಕೂ ಹೆಚ್ಚು ಜನ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುತ್ತಾರೆ ಎಂದ ಅವರು, ಕೆಲವು ಗುತ್ತಿಗೆ ಸಂಸ್ಥೆಗಳು ತಮಗೆ ಸರಿಯಾಗಿ ವೇತನ, ಪಿ.ಎಫ್ ಸೇರಿದಂತೆ ಮತ್ತಿತರ ಕಾನೂನಾತ್ಮಕ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಅನೇಕ ಬಾರಿ ದೂರಿದ್ದಾರೆ. ಈ ರೀತಿಯ ವಿವಿದ್ದೋದ್ದೇಶ ಸಂಘಗಳನ್ನು ಮಾಡಿಕೊಳ್ಳುವುದರಿಂದ ಅನೇಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದರು. ವಿವಿದ್ದೋದ್ದೇಶ ಸಹಕಾರ ಸಂಘ ಪ್ರಾರಂಭ ಕುರಿತು ಈಗಾಗಲೇ ಜಿಲ್ಲೆಯ ಅನೇಕ ಸರಕಾರಿ, ನಿಗಮ ಮಂಡಳಿ ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ಆಧಾರದ ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 12 ರಂದು ಸಭೆಯನ್ನು ಕರೆದು ಅವರೊಂದಿಗೆ ಸಾಧಕ-ಬಾಧಕಗಳನ್ನು ಚರ್ಚಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ ಗಡದ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಬಾಲ ಕಾರ್ಮಿಕ ಸಂಘದ ಯೋಜನಾಧಿಕಾರಿ ಅಮೃತ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು, ತಾಲೂಕು ತಹಶೀಲ್ದಾರ್ ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!