ಮಣಿಪಾಲ, ಡಿ.7: ಡಾ.ಬಿ.ಆರ್ ಅಂಬೇಡ್ಕರ್ ಅವರ 68 ನೇ ಮಹಾಪರಿನಿರ್ವಾಣ ದಿನಾಚರಣೆ ಅಂಗವಾಗಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಸಂಕೀರ್ಣ ಆವರಣದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಮಾಲಾರ್ಪಣೆ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಂತಾದವರು ಉಪಸ್ಥಿತರಿದ್ದರು.