ಬೆಳಗಾವಿ, ಡಿ.12: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಮತ್ತು ಪಟ್ಟಿ ಪ್ರಕಟಿಸಿದ ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.
ಪ್ರೌಢಶಾಲಾ ಸಹಶಿಕ್ಷಕರ ಬಡ್ತಿ ಪ್ರಕ್ರಿಯೆ ಫೆಬ್ರವರಿ ಅಂತ್ಯದೊಳಗೆ ಪೂರ್ಣ
ಪ್ರೌಢಶಾಲಾ ಸಹಶಿಕ್ಷಕರ ಬಡ್ತಿ ಪ್ರಕ್ರಿಯೆ ಫೆಬ್ರವರಿ ಅಂತ್ಯದೊಳಗೆ ಪೂರ್ಣ
Date: