Sunday, January 19, 2025
Sunday, January 19, 2025

ಉಡುಪಿಗೆ ಮೆಡಿಕಲ್ ಕಾಲೇಜು- ಕೇಂದ್ರ ಆರೋಗ್ಯ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ಉಡುಪಿಗೆ ಮೆಡಿಕಲ್ ಕಾಲೇಜು- ಕೇಂದ್ರ ಆರೋಗ್ಯ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

Date:

ನವದೆಹಲಿ, ಡಿ.15: ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಿಗಾಗಿ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಅಸ ಪೂಜಾರಿ ಭೇಟಿಯಾಗಿ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲೆ ಸುಮಾರು 167 ಗ್ರಾಮ ಪಂಚಾಯಿತಿ ಮತ್ತು15 ಲಕ್ಷ ಜನಸಂಖ್ಯೆ ಹೊಂದಿರುವ ಪ್ರದೇಶ ವಾಗಿದ್ದು ಶಿಕ್ಷಣ ಕ್ಷೇತ್ರ, ದೇವರ ಬೀಡು, ಪ್ರವಾಸಿ ತಾಣದಲ್ಲಿ ಮುಂದಿರುವ ಉಡುಪಿ ಜಿಲ್ಲೆಗೆ ಒಂದು ಸುಸಜ್ಜಿತವಾದ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದ್ದು ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯವಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ತಜ್ಞ ವೈದ್ಯರ ನೇಮಕ ನಡೆಯಲಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಅವರ ಸೇವೆ ಲಭ್ಯವಾಗಲಿದೆ. ಮತ್ತು ಉಡುಪಿ ಜನತೆಯ ಉತ್ತಮವಾದ ಆರೋಗ್ಯ ಸೇವೆಗಾಗಿ ಉಡುಪಿ ಜಿಲ್ಲೆಗೆ ಸುಸಜ್ಜಿತವಾದ ಸರಕಾರಿ ವೈದ್ಯಕೀಯ ಕಾಲೇಜ್ ಮಂಜೂರು ಮಾಡಬೇಕೆಂದು ಆರೋಗ್ಯ ಸಚಿವರಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿನಂತಿಸಿದರು. ಸಂಸದ ಬೇಡಿಕೆಗೆ ಸ್ಪಂದಿಸಿದ ಸಚಿವರು ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜ್ ನೀಡುವುದರ ಬಗ್ಗೆ
ಪರಿಶೀಲನೆ ಮಾಡುವುದಾಗಿ ತಿಳಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!