Wednesday, December 18, 2024
Wednesday, December 18, 2024

ಉಡುಪಿ: ನಿಯಮ ಉಲ್ಲಂಘಿಸಿದ್ದಲ್ಲಿ ಪರವಾನಿಗೆ ರದ್ದು

ಉಡುಪಿ: ನಿಯಮ ಉಲ್ಲಂಘಿಸಿದ್ದಲ್ಲಿ ಪರವಾನಿಗೆ ರದ್ದು

Date:

ಉಡುಪಿ, ಡಿ.17: ನಗರಸಭಾ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರು ಹಾಗೂ ಗೂಡಂಗಡಿಗಳ ಮಾಲೀಕರು ತಮಗೆ ಸೂಚಿಸಿದ ಸೀಮಿತ ವಾಪ್ತಿಯನ್ನು ಹೊರತು ಪಡಿಸಿ ಅನಧಿಕೃತವಾಗಿ ಹೆಚ್ಚುವರಿ ಪ್ರದೇಶವನ್ನು ವಿಸ್ತರಣೆ ಮಾಡಿ ಬಳಸಿಕೊಳ್ಳುವಂತಿಲ್ಲ. ಎಲ್ಲಾ ಗೂಡಂಗಡಿಗಳಲ್ಲಿ ಕಡ್ಡಾಯವಾಗಿ ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೂಡಂಗಡಿಗಳು ಸಾರ್ವಜನಿಕರಿಗೆ, ವಾಹನ ಚಾಲಕರಿಗೆ ತೊಂದರೆ ನೀಡುವಂತಿರಬಾರದು, ಫಾಸ್ಟ್ ಫುಡ್ ಅಥವಾ ರಸ್ತೆ ಬದಿಗಳಲ್ಲಿ ಗೂಡಂಗಡಿಗಳ ಮೂಲಕ ಹೋಟೆಲ್ ನಡೆಸುವವರು ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ಆಹಾರ ಗುಣಮಟ್ಟತೆ ಮತ್ತು ಸುರಕ್ಷತಾ ಇಲಾಖೆಯಿಂದ ಪರವಾನಿಗೆ ಪಡೆದಿರಬೇಕು ಹಾಗೂ ಯಾವುದೇ ಗೂಡಂಗಡಿಗಳಲ್ಲಿ ತಂಬಾಕು ಮತ್ತು ಇತರ ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಬೀದಿ ಬದಿಯಲ್ಲಿ ವ್ಯಾಪಾರಸ್ತರು ಹಾಗೂ ಗೂಡಂಗಡಿ ಮಾಲೀಕರು ನಗರಸಭೆ ಸೂಚಿಸಿರುವ ನಿಯಮವನ್ನು ಪಾಲಿಸದೇ ಇದ್ದಲ್ಲಿ ಅಂತಹ ಗೂಡಂಗಡಿ ಮಾಲೀಕರಿಗೆ 5000 ರೂ. ದಂಡ ವಿಧಿಸಿ, ಗೂಡಂಗಡಿಯನ್ನು ತೆರವುಗೊಳಿಸಿ ಪರವಾನಿಗೆ ರದ್ದುಪಡಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆ ಮಂಡನೆ

ನವದೆಹಲಿ, ಡಿ.17: ಸಂಸತ್ತಿನಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆ'ಯನ್ನು ಮಂಗಳವಾರ...

ಕೇಂದ್ರೀಯ ವಿದ್ಯಾಲಯದಿಂದ ಶಿಸ್ತು: ಜಿ.ಪಂ. ಸಿಇಓ ಪ್ರತೀಕ್ ಬಾಯಲ್

ಉಡುಪಿ, ಡಿ.17: ವಿದ್ಯಾರ್ಥಿಗಳಲ್ಲಿ ಶಿಸ್ತು, ಶೈಕ್ಷಣಿಕ ಕಠಿಣತೆ ಮತ್ತು ನಾಯಕತ್ವದ ಗುಣಗಳನ್ನು...

ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಆಯ್ಕೆ

ಕೋಟ, ಡಿ.17: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ)ಕೋಟ, ಡಾ....

ಎಸ್.ವಿ.ಪಿ.ಎಲ್ ಕ್ರಿಕೆಟ್ ಪಂದ್ಯಾಟ

ಗಂಗೊಳ್ಳಿ, ಡಿ.17: ಗ್ರಾಮೀಣ ಮಟ್ಟದಲ್ಲಿ ಹಮ್ಮಿಕೊಳ್ಳುವ ಪಂದ್ಯಾಟಗಳು ವಿದ್ಯಾರ್ಥಿಗಳನ್ನು ಉನ್ನತ ಸಾಧನೆಗಳನ್ನು...
error: Content is protected !!