ಬೆಳಗಾವಿ, ಡಿ.19: ಮಧ್ಯ ಕರ್ನಾಟಕ ಭಾಗದ ಬಹುದಿನದ ಬೇಡಿಕೆಯಾದ ಭದ್ರಾ ಮೇಲ್ದಂಡೆ ಯೋಜನೆಯ ಮೊದಲನೇ ಹಂತವನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು. 2027-28ನೇ ಸಾಲಿನ ಮಾರ್ಚ್ ಅಂತ್ಯಕ್ಕೆ ಯೋಜನೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದ್ದು, ಇನ್ನೂ ರೂ.11,358.54 ಕೋಟಿ ಅನುದಾನ ಬೇಕಾಗುತ್ತದೆ. ಕೇಂದ್ರ ಸರ್ಕಾರ ಆಯವ್ಯಯದಲ್ಲಿ ಘೋಷಿಸಿದಂತೆ ರೂ. 5,300 ಕೋಟಿ ಅನುದಾನವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಅನುದಾನ ಲಭಿಸಿದರೆ ಯೋಜನೆ ಪೂರ್ಣಗೊಳಿಸಲು ಸಹಾಯವಾಗಲಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ತಿಳಿಸಿದರು.
ಆದ್ಯತಾ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆ ಮೊದಲ ಹಂತ ಪೂರ್ಣ
ಆದ್ಯತಾ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆ ಮೊದಲ ಹಂತ ಪೂರ್ಣ
Date: