Wednesday, January 22, 2025
Wednesday, January 22, 2025

ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಸ್ಫೋಟ: ಎಂಟು ಸಾವು, ಹಲವರಿಗೆ ಗಾಯ, 40 ವಾಹನಗಳು ಬೂದಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಸ್ಫೋಟ: ಎಂಟು ಸಾವು, ಹಲವರಿಗೆ ಗಾಯ, 40 ವಾಹನಗಳು ಬೂದಿ

Date:

ಯು.ಬಿ.ಎನ್.ಡಿ., ಡಿ.20: ಶುಕ್ರವಾರ ನಸುಕಿನ ವೇಳೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಬೃಹತ್ ಎಲ್‌ಪಿಜಿ ಟ್ಯಾಂಕರ್ ಸ್ಫೋಟಗೊಂಡು ಎಂಟು ಜನರು ಸಾವನ್ನಪ್ಪಿ ಹಲವರಿಗೆ ತೀವ್ರ ಸುಟ್ಟಗಾಯಗಳಾಗಿವೆ. ಸುಮಾರು 40 ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯ ನಂತರ 39 ಜನರನ್ನು ಎಸ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಭೇಟಿಯಾಗಲು ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಆಸ್ಪತ್ರೆಗೆ ಭೇಟಿ ನೀಡಿದರು. 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ. ಪೆಟ್ರೋಲ್ ಪಂಪ್ ಬಳಿಯೇ ಸ್ಫೋಟ ಸಂಭವಿಸಿದೆ.

ಏನಾಗಿತ್ತು? ಅಧಿಕಾರಿಗಳ ಪ್ರಕಾರ, ಎಲ್‌ಪಿಜಿ ತುಂಬಿದ ಟ್ಯಾಂಕರ್‌ ಅಜ್ಮೀರ್‌ನಿಂದ ಜೈಪುರಕ್ಕೆ ಬರುತ್ತಿತ್ತು. ಬೆಳಗಿನ ಜಾವ 5.44ರ ಸುಮಾರಿಗೆ ಯು-ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಜೈಪುರದಿಂದ ಬರುತ್ತಿದ್ದ ಟ್ರಕ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದ್ದು, ಸ್ವಲ್ಪ ಸಮಯದೊಳಗೆ ಇಡೀ ಪ್ರದೇಶ ಬೆಂಕಿಯ ಚೆಂಡಾಗಿದೆ. 30 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಆವರಿಸಿದ್ದು, ದಟ್ಟವಾದ ಕಪ್ಪು ಹೊಗೆ ಬಾನೆತ್ತರಕ್ಕೆ ವ್ಯಾಪಿಸಿತ್ತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...
error: Content is protected !!