Sunday, December 22, 2024
Sunday, December 22, 2024

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಡಿ.21: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಯುವ ನೀತಿಯ ಅನ್ವಯ ರಾಜ್ಯ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ ಎಪಿಡೀಮಿಯಾಲ್ಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆ ಮೂಲಕ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಜಿಲ್ಲೆಯಲ್ಲಿ ಖಾಲಿ ಇರುವ ಯುವ ಪರಿವರ್ತಕರ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಕನಿಷ್ಠ 21 ರಿಂದ 35 ವರ್ಷದೊಳಗಿನ ಕನ್ನಡ ಭಾಷೆ ಸ್ಪಷ್ಟವಾಗಿ ಮಾತನಾಡುವ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿರುವ ಯುವಕ ಹಾಗೂ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಸಂಪೂರ್ಣ ಹೆಸರು, ವಯಸ್ಸು, ವಿಳಾಸ ಹಾಗೂ ಮೂಲದಾಖಲೆಗಳೊಂದಿಗೆ ಡಿಸೆಂಬರ್ 31 ರ ಒಳಗಾಗಿ ಉಪನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿರ್ವ: ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

ಶಿರ್ವ, ಡಿ.22: ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆ ಶಿರ್ವ ಇದರ 18...

ಫೆ.29 ರಿಂದ ಗ್ಲಿಂಪ್ಸಸ್ ಆಫ್ ಕರ್ನಾಟಕ ಪ್ರವಾಸ

ಬೆಂಗಳೂರು, ಡಿ.22: ಗೋಲ್ಡನ್ ಚಾರಿಯಟ್ ರೈಲು ಯಾತ್ರೆ ಪುನಾರಾರಂಭಗೊಂಡಿದ್ದು, ಫೆಬ್ರವರಿ 29...

ರಾಜ್ಯಮಟ್ಟದ ಶಿಷ್ಯವೇತನಕ್ಕೆ ಆಯ್ಕೆ

ಉಡುಪಿ, ಡಿ.22: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯವರು ನೀಡುವ ರಾಜ್ಯ ಮಟ್ಟದ...
error: Content is protected !!