ಹಿರಿಯಡಕ, ಡಿ.24: ರಾಜೀವ ಗಾಂಧಿ ವಸತಿ ನಿಗಮದಿಂದ ಕೊರಗ ಸಮುದಾಯದ 10 ಫಲಾನುಭವಿಗಳಿಗೆ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಜೂರಾದ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರಗಳ ವಿತರಣಾ ಕಾರ್ಯಕ್ರಮ ಹಿರಿಯಡಕ ಶಾಸಕರ ಕಚೇರಿಯಲ್ಲಿ ನಡೆಯಿಯಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆದೇಶ ಪತ್ರಗಳನ್ನು ವಿತರಿಸಿದರು. ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ, ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಮಲ್ಯ, ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುರಂದರ ಕೋಟ್ಯಾನ್, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸುನಿಲ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.