Saturday, January 4, 2025
Saturday, January 4, 2025

ಉಚಿತ ದಂತ ಚಿಕಿತ್ಸಾ ಶಿಬಿರ

ಉಚಿತ ದಂತ ಚಿಕಿತ್ಸಾ ಶಿಬಿರ

Date:

ಕೋಟ, ಡಿ.29: ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಂಘಸಂಸ್ಥೆಗಳು ಗ್ರಾಮದಲ್ಲಿ ಹುಟ್ಟಿಕೊಳ್ಳಬೇಕು ಆಗ ಮಾತ್ರ ಗ್ರಾಮದಲ್ಲಿ ಒಂದಿಷ್ಟು ಬದಲಾವಣೆಗಳು ಕಾಣಲು ಸಾಧ್ಯವಾಗುತ್ತದೆ ಎಂದು ಸಾಲಿಗ್ರಾಮ ಶ್ರೀ ಗರುನರಸಿಂಹ ದೇಗುಲದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ಅಭಿಪ್ರಾಯಪಟ್ಟರು. ಕೋಟ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರೋಟರಿ ಕ್ಲಬ್ ಕುಂದಾಪುರ ನೇತೃತ್ವದಲ್ಲಿ ಕೋಟ ಗ್ರಾಮ ಪಂಚಾಯತ್, ಗೀತಾನಂದ ಫೌಂಡೇಶನ್ ಮಣೂರು, ಪಂಚವರ್ಣ ಯುವಕ ಮಂಡಲ ಕೋಟ ಪಂಚವರ್ಣ ಮಹಿಳಾ ಮಂಡಲ ಕೋಟ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ ತಜ್ಞದಂತ ವೈದ್ಯರಿಂದ ಉಚಿತ ದಂತ ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೋಟರಿ ಕ್ಲಬ್ ಕುಂದಾಪುರ ಅಧ್ಯಕ್ಷ ಲಿಯಾಖತ್ ಆಲಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ, ಉಪಾಧ್ಯಕ್ಷ ಪಾಂಡು ಪೂಜಾರಿ, ಗೀತಾನಂದ ಟ್ರಸ್ಟ್ ಪರವಾಗಿ ಜನತಾ ವ್ಯವಸ್ಥಾಪಕ ಶ್ರೀನಿವಾಸ ಕುಂದರ್, ರೋಟರಿ ಕ್ಲಬ್ ಕುಂದಾಪುರದ ಕಾರ್ಯದರ್ಶಿ ಸಚ್ಛಿದಾನಂದ, ಕೆ.ಎಂಸಿ ಮಣಿಪಾಲದ ದಂತವಿಭಾಗದ ವೈದ್ಯೆ ಡಾ. ಶ್ರೇಯಾ, ರೋಟರಿ ಮ್ಯಾನೇಜ್ಮೆಂಟ್ ಚೇರ್ಮೆನ್ ಗಣೇಶ ಐತಾಳ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಕೆ.ಹಂದಟ್ಟು ಮುಂತಾದವರು ಉಪಸ್ಥಿತರಿದ್ದರು. ಸುಮಾರು ನೂರಕ್ಕೂ ಅಧಿಕ ಮಂದಿ ಶಿಬಿರದರ ಪ್ರಯೋಜನ ಪಡೆದುಕೊಂಡರು. ಪಂಚವರ್ಣ ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿ ವಂದಿಸಿದರು. ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರತಿಭಾ ಕಾರಂಜಿ: ಮಣೂರು ಪಡುಕರೆ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಕೋಟ, ಜ.4: ಶ್ರೀ ದುರ್ಗಾ ಆಂಗ್ಲಮಾಧ್ಯಮ ಪ್ರೌಢಶಾಲೆ ಕೊಕ್ಕರ್ಣೆ ಇಲ್ಲಿ ನಡೆದ...

ರಥಬೀದಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ದಶಮ ಸಂಭ್ರಮಕ್ಕೆ ಚಾಲನೆ

ಮಂಗಳೂರು, ಜ.3: ಡಾ.ಪಿ ದಯಾನಂದ ಪೈ ಪಿ ಸತೀಶ ಪೈ ಸರ್ಕಾರಿ...

ದೇಶದೆಲ್ಲೆಡೆ ಗ್ರಂಥಾಲಯ ಆಂಧೋಲನವಾಗಲಿ: ಡಾ. ಮಹಾಬಲೇಶ್ವರ ರಾವ್

ಉಡುಪಿ, ಜ.3: ಜನರಲ್ಲಿ ಓದುವ ಹವ್ಯಾಸ ವೃದ್ಧಿ, ಜ್ಞಾನ ಗಳಿಕೆ, ವಿದ್ಯಾವಂತರಾಗಲು...

ಹಾವುಗಳು ಪ್ರಕೃತಿಯ ಒಡಲಿನ ಒಡನಾಡಿ: ಗುರುರಾಜ್ ಸನಿಲ್

ಕೋಟ, ಜ.3: ಪರಿಸರ ಜೀವ ಸಮತೋಲನದಲ್ಲಿ ಪ್ರಕೃತಿಯೇ ಸೃಷ್ಟಿಸಿಕೊಂಡ ಅನೇಕ ಪ್ರಬೇಧದ...
error: Content is protected !!