Sunday, January 5, 2025
Sunday, January 5, 2025

ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Date:

ಗಂಗೊಳ್ಳಿ, ಡಿ.30: ಮಾನವೀಯತೆಗಿಂತ ಮಿಗಿಲಾದ ಧರ್ಮ ಯಾವುದೂ ಇಲ್ಲ. ನಾವು ಬೆಳೆದು ಉಳಿದವರನ್ನು ಕೂಡ ಬೆಳೆಸುತ್ತಾ ಸಾಗುವಲ್ಲಿ ಜೀವನದ ನಿಜವಾದ ಸಾರ್ಥಕತೆ ಅಡಗಿದೆ ಎಂದು ಉದ್ಯಮಿ ಮೌಲಾನ ಇಬ್ರಾಹಿಂ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿ.ಎಸ್​.ವಿ.ಎಸ್ ಅಸೋಸಿಯೇಷನ್ ವತಿಯಿಂದ ನಡೆದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು. ಬದುಕಿನಲ್ಲಿ ಏರಿಳಿತಗಳು ಸಾಮಾನ್ಯ.. ಆದರೆ ಯಾವುದೇ ಪರಿಸ್ಥಿತಿಯಲ್ಲಿಯೂ ಧೃತಿ ಗೆಡದೆ ನಮ್ಮ ಗುರಿಯ ಕಡೆ ನಾವು ಮುಂದುವರಿಯಬೇಕು ಎಂದು ಅವರು ಅಭಿಪ್ರಾಯಪಟ್ಟರು. ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಮೌಲಾನ ಇಬ್ರಾಹಿಂ ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ 94 ವಿದ್ಯಾರ್ಥಿಗಳಿಗೆ 6.50 ಲಕ್ಷ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಂಚಾಲಕ ಎನ್ ಸದಾಶಿವ ನಾಯಕ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಿ.ಎಸ್.ವಿ.ಎಸ್ ಅಸೋಷಿಯೇಷನ್ ನ ಸದಸ್ಯ ರಾಮನಾಥ ನಾಯಕ್ ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಥಾಮಸ್ ಪಿ. ಎ ಅತಿಥಿಗಳ ಪರಿಚಯ ಮಾಡಿದರು. ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಯು ವೆಂಕಟೇಶಮೂರ್ತಿ, ಸುಗುಣ ಆರ್ ಕೆ ನಮಿತಾ ಶೆಣೈ ಸಹಕರಿಸಿದರು. ಸಪೇಕ್ಷಾ ಮತ್ತು ಶ್ರೀನಿಧಿ ಪ್ರಾರ್ಥಿಸಿದರು. ಪ್ರಾಂಶುಪಾಲೆ ಕವಿತಾ ಎಮ್ ಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಸಂಪತ್ ಕುಮಾರ್ ಎಸ್.ಶಿವನಗಿ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಳಗಾವಿ, ಜ.4: ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಿದ ಕೆ.ಎಲ್.ಇ ಸಂಸ್ಥೆಯ ಡಾ. ಸಂಪತ್...

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಚಾಲನೆ

ಹುಬ್ಬಳ್ಳಿ, ಜ.4: ಪುಣೆ -ಬೆಳಗಾವಿ -ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ ಪ್ರೆಸ್...

ಇಂಧನ ಮಿಶ್ರಿತ ನೀರು; ಸಮಸ್ಯೆ ಶೀಘ್ರ ಬಗೆಹರಿಸಿ

ಉಳ್ಳಾಲ ತಾಲೂಕು ಫಜೀರು ಗ್ರಾಮದ ಸಾಂಬಾರತೋಟ ಪರಿಸರದ ಜನರು ಎದುರಿಸುತ್ತಿರುವ ನೀರಿನ...

ನಾಳೆ (ಜ.5) ರಾಜಾಂಗಣದಲ್ಲಿ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ; ಔಷಧಿ ವಿತರಣಾ ಕಾರ್ಯಕ್ರಮ

ಉಡುಪಿ, ಜ.4: ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ ಉಡುಪಿ ಇವರ ಆಶ್ರಯದಲ್ಲಿ...
error: Content is protected !!