Tuesday, January 7, 2025
Tuesday, January 7, 2025

ಆಧುನಿಕತೆಯ ಜೀವನಶೈಲಿಯಿಂದ ಹೊರಬನ್ನಿ: ಡಾ.ಮಾಧವ ಪೈ

ಆಧುನಿಕತೆಯ ಜೀವನಶೈಲಿಯಿಂದ ಹೊರಬನ್ನಿ: ಡಾ.ಮಾಧವ ಪೈ

Date:

ಕೋಟ, ಡಿ.31: ಇಂದಿನ ಜೀವನ ಪದ್ಧತಿ ಆಧುನಿಕತೆಗೆ ಒಗ್ಗಿಕೊಂಡಿದೆ. ಇದರ ದುಷ್ಪರಿಣಾಮದಿಂದ ಸಮಾಜದಲ್ಲಿ ಒಂದಿಷ್ಟು ಬದಲಾವಣೆಗೊಂಡು ಜೀವನ ಶೈಲಿ ಅಧಃಪತನದತ್ತ ಸಾಗುತ್ತಿದೆ. ಇದು ದುರದೃಷ್ಟಕರ, ಈ ಬಗ್ಗೆ ಪೋಷಕರೇ ಜಾಗೃತರಾಗಬೇಕಾದ ಸಮಯ ಎದುರಾಗಿದೆ ಎಂದು ಕೋಟ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಕೋಟ ಮಾಧವ ಪೈ ಹೇಳಿದರು. ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ಆಯೋಜನೆಯಲ್ಲಿ ಕೋಡಿ ಹೊಸಬೇಂಗ್ರೆ ಅಂಗನವಾಡಿಯಲ್ಲಿ ಗ್ರಾಮ ಪಂಚಾಯತ್ ಕೋಡಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ಸಹಭಾಗಿತ್ವದಡಿ ಸ್ವಚ್ಛ ಹಾಗೂ ಆರೋಗ್ಯವಂತ ಸಮಾಜದ ಬಗ್ಗೆ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ವ್ಯಾಮೋಹ, ದಿನಚರಿಯ ಆಹಾರ ಪದ್ಧತಿಗಳು ಬದಲಾಗಿವೆ. ಇದರಿಂದ ದೇಹದ ಆರೋಗ್ಯ ಮತ್ತು ಮನಸ್ಸಿನ ಮೇಲೆ ವ್ಯತಿರಿಕ್ತ ದುಷ್ಪರಿಣಾಮ ಎದುರಿಸುವಂತಾಗಿದೆ. ಈ ದಿಸೆಯಲ್ಲಿ ನಮ್ಮ ಆಹಾರ ಕ್ರಮ ದೇಶಿಯ ಪದ್ಧತಿ, ಯೋಗ ಆಧ್ಯಾತ್ಮಗಳ ಮೊರೆಹೋಗುವ ಅವಶ್ಯಕತೆಯನ್ನು ಮನದಟ್ಟು ಮಾಡಿದರು. ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಕಾರ್ವಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಸಂಯೋಜಕ ರಾಘವೇಂದ್ರ ಆಚಾರ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಮೇಲ್ವಿಚಾರಕಿ ಲಕ್ಷ್ಮೀ, ಕೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಮೆಂಡನ್, ಕೃಷ್ಣ ಪೂಜಾರಿ ಪಿ., ಪಂಚವರ್ಣ ಯುವಕ ಮಂಡಲದ ನೂತನ ಅಧ್ಯಕ್ಷ ಮನೋಹರ್ ಪೂಜಾರಿ, ಹೊಸಬೆಂಗ್ರೆ ಅಂಗನವಾಡಿ ಬಾಲಾವಿಕಾಸ ಸಮಿತಿ ಅಧ್ಯಕ್ಷೆ ಸುಲೋಚನಾ, ಸದಸ್ಯರಾದ ನಿರ್ಮಲ, ಸಂಜೀವಿನಿ ಸಂಘದ ಅಧ್ಯಕ್ಷೆ ದೀಪಾ ಖಾರ್ವಿ, ಸ್ಥಳೀಯರಾದ ಸುಜಾತಾ ಖಾರ್ವಿ, ಜ್ಯೋತಿ ಜೆ., ಸುಮತಿ ಎ ಬೆನ್ನು ಹಾಗೂ ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು, ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಕೋಡಿ ಹೊಸಬೇಂಗ್ರೆ ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್ ಕುಂದರ್ ಸ್ವಾಗತಿಸಿ, ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಪಂಚವರ್ಣದ ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಉಡುಪಿ ಬುಲೆಟಿನ್’ ಇಮ್ಪ್ಯಾಕ್ಟ್; ಹೆದ್ದಾರಿಯ ಮೇಲೆ ಬಿದ್ದಿದ್ದ ಮಣ್ಣಿನ ರಾಶಿ ತೆರವು

ಉಡುಪಿ ಬುಲೆಟಿನ್, ಜ.6: ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆಯ ಆಶೀರ್ವಾದ...

ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ, ಜ.6: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ...

ಬಾರಕೂರು: ಅಂತರ ಕಾಲೇಜು ಬೆಸ್ಟ್ ಟ್ಯಾಲೆಂಟ್ ಅವಾರ್ಡ್, ವಿಡಿಯೋ ಮೇಕಿಂಗ್ ಸ್ಪರ್ಧೆ

ಬಾರಕೂರು, ಜ.6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರ...

ಮಣಿಪಾಲ ಕೆ.ಎಂ.ಸಿ: ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

ಮಣಿಪಾಲ, ಜ.6: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಭಾರತ ಸರ್ಕಾರದ ಅನುದಾನಿತ...
error: Content is protected !!