Tuesday, January 7, 2025
Tuesday, January 7, 2025

ವಿಕಲಚೇತನರ ರಿಯಾಯಿತಿ ಬಸ್‌ ಪಾಸ್: ಅರ್ಜಿ ಆಹ್ವಾನ

ವಿಕಲಚೇತನರ ರಿಯಾಯಿತಿ ಬಸ್‌ ಪಾಸ್: ಅರ್ಜಿ ಆಹ್ವಾನ

Date:

ಉಡುಪಿ, ಡಿ.31: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದ ವತಿಯಿಂದ ಸಕಾಲ ಸಂಬಂಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ಸುಪಾಸನ್ನು ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ನಲ್ಲಿ ಅಗತ್ಯ ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ವಿಕಲಚೇತನರ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ 2024 ನೇ ಸಾಲಿನಲ್ಲಿ ವಿತರಿಸಿರುವ ಬಸ್ಸು ಪಾಸುಗಳ ಅವಧಿಯು 2024 ರ ಡಿಸೆಂಬರ್ 31 ಕ್ಕೆ ಮುಕ್ತಾಯಗೊಂಡಿದ್ದು, 2025 ನೇ ಸಾಲಿಗಾಗಿ ಈ ಬಸ್ಸು ಪಾಸುಗಳನ್ನು ಜನವರಿ 01 ರಿಂದ ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ. ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ಬಂದು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ 2024 ನೇ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು 2025 ರ ಫೆಬ್ರವರಿ 28 ರ ವರೆಗೆ ಮಾನ್ಯ ಮಾಡಲಾಗುವುದು ಎಂದು ಮಂಗಳೂರು ಕ.ರಾ.ರ.ಸಾ. ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕಂಟೋನ್ಮೆಂಟ್ ಕಥೆಗಳು’ ಲೋಕಾರ್ಪಣೆ

ಬೈಂದೂರು, ಜ.7: ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡುವ ಸೈನಿಕರಿಂದಾಗಿ ನಾವು ನೆಮ್ಮದಿಯಿಂದ...

ಕೊಡಂಕೂರು: ರೂ. 2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಚಾಲನೆ

ಉಡುಪಿ, ಜ.7: ಉಡುಪಿ ನಗರಸಭೆಯ ಕೊಡಂಕೂರು ವಾರ್ಡಿನ ನೆರೆಪೀಡಿತ ತಾರಕಟ್ಟ ಪ್ರದೇಶದಲ್ಲಿ...
error: Content is protected !!