Tuesday, January 7, 2025
Tuesday, January 7, 2025

ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣೆ

ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣೆ

Date:

ಉಡುಪಿ, ಜ.2: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಜಿಲ್ಲೆಯಲ್ಲಿ ನಡೆದ ಮೌಲ್ಯಮಾಪನಾ ಶಿಬಿರದಲ್ಲಿ 426 ವಿಕಲಚೇತನರು ಹಾಗೂ 283 ಹಿರಿಯ ನಾಗರಿಕರು ವಿವಿಧ ಸಾಧನ ಸಲಕರಣೆಗಳನ್ನು ಪಡೆಯಲು ಅಲಿಂಕೋ ಸಂಸ್ಥೆಯಿಂದ ಆಯ್ಕೆ ಮಾಡಲಾಗಿರುತ್ತದೆ. ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಮಾತ್ರ ಅಲಿಂಕೋ ಸಂಸ್ಥೆ ವತಿಯಿಂದ ಜಿಲ್ಲಾಡಳಿತ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಸಾಧನ-ಸಲಕರಣೆಗಳ ವಿತರಣಾ ಕಾರ್ಯಕ್ರಮವು ಜನವರಿ 6 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಹಾಜರಾಗುವ ವಿಕಲಚೇತನ ಮತ್ತು ಹಿರಿಯ ನಾಗರಿಕರ ಫಲಾನುಭವಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ತರಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕು ವ್ಯಾಪ್ತಿಯಲ್ಲಿ ಎಂ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿ.ಆರ್.ಡಬ್ಲ್ಯೂ, ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯು.ಆರ್.ಡಬ್ಲ್ಯೂ ಅಥವಾ ಅಂಗನವಾಡಿ ಕಾರ್ಯಕರ್ತೆಯರನ್ನು ಹಾಗೂ ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ: 0820-2574810, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ದೂ.ಸಂಖ್ಯೆ: 0820-2533372 ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಸಂಖ್ಯೆ: 0820-2526394 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಉಡುಪಿ ಬುಲೆಟಿನ್’ ಇಮ್ಪ್ಯಾಕ್ಟ್; ಹೆದ್ದಾರಿಯ ಮೇಲೆ ಬಿದ್ದಿದ್ದ ಮಣ್ಣಿನ ರಾಶಿ ತೆರವು

ಉಡುಪಿ ಬುಲೆಟಿನ್, ಜ.6: ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆಯ ಆಶೀರ್ವಾದ...

ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ, ಜ.6: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ...

ಬಾರಕೂರು: ಅಂತರ ಕಾಲೇಜು ಬೆಸ್ಟ್ ಟ್ಯಾಲೆಂಟ್ ಅವಾರ್ಡ್, ವಿಡಿಯೋ ಮೇಕಿಂಗ್ ಸ್ಪರ್ಧೆ

ಬಾರಕೂರು, ಜ.6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರ...

ಮಣಿಪಾಲ ಕೆ.ಎಂ.ಸಿ: ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

ಮಣಿಪಾಲ, ಜ.6: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಭಾರತ ಸರ್ಕಾರದ ಅನುದಾನಿತ...
error: Content is protected !!