Tuesday, January 7, 2025
Tuesday, January 7, 2025

ರಥಬೀದಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ದಶಮ ಸಂಭ್ರಮಕ್ಕೆ ಚಾಲನೆ

ರಥಬೀದಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ದಶಮ ಸಂಭ್ರಮಕ್ಕೆ ಚಾಲನೆ

Date:

ಮಂಗಳೂರು, ಜ.3: ಡಾ.ಪಿ ದಯಾನಂದ ಪೈ ಪಿ ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇದರ ಹಿರಿಯ ವಿದ್ಯಾರ್ಥಿಗಳ ಸಂಘ (ರಿ ಇದರ ದಶಮ ಸಂಭ್ರಮದ ಅಂಗವಾಗಿ ಲೋಗೋ ಅನಾವರಣ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಕೆಸೆಟ್/ನೆಟ್ ಪರೀಕ್ಷಾ ಪೂರ್ವ ತಯಾರಿ ಮಾಹಿತಿ ಕಾರ್ಯಗಾರ ಕಾರ್ಯಕ್ರಮ ಶುಕ್ರವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿನ ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಶೇಷಪ್ಪ ಕೆ ಇವರು ದಶಮ ಸಂಭ್ರಮದ ಲೋಗೋ ಅನಾವರಣಗೊಳಿಸಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಶ್ರೀ ಗೋಕರ್ಣಾಥೇಶ್ವರ ಕಾಲೇಜು ಮಂಗಳೂರು ಇಲ್ಲಿಯ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಯತೀನ್ ಇವರು ಮುಖ್ಯ ಅತಿಥಿಗಳಾಗಿ ಹಾಗೂ ಕೆ ಸೆಟ್/ನೆಟ್ ಪರೀಕ್ಷಾ ಪೂರ್ವ ತಯಾರಿ ಮಾಹಿತಿ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಜಯಕರ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಏಸಿ ಸಂಯೋಜಕ ದೇವಿಪ್ರಸಾದ್, ಸ್ನಾತಕೋತ್ತರ ವಿಭಾಗ ಸಂಯೋಜಕ ಡಾ. ಲೋಕೇಶನಾಥ್ , ಐಕ್ಯೂಏಸಿ ಉಪಸಂಯೋಜಕಿ ಡಾ. ಜ್ಯೋತಿಪ್ರಿಯ, ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯೋಜಕ ನಾಗರಾಜ್ ಎಂ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಧೀರಜ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸುದೀಕ್ಷ ಪ್ರಾರ್ಥನೆಯನ್ನು ನೆರವೇರಿಸಿದರು. ಆದಿತ್ಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ತುಷಾರ್ ಕೆ ವಂದಿಸಿದರು. ಸ್ನಾತಕೋತ್ತರ ವಿಭಾಗದ ಸುಮಾರು 150ಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಈ ಕಾರ್ಯಗಾರದಲ್ಲಿ ಭಾಗವಹಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕಂಟೋನ್ಮೆಂಟ್ ಕಥೆಗಳು’ ಲೋಕಾರ್ಪಣೆ

ಬೈಂದೂರು, ಜ.7: ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡುವ ಸೈನಿಕರಿಂದಾಗಿ ನಾವು ನೆಮ್ಮದಿಯಿಂದ...

ಕೊಡಂಕೂರು: ರೂ. 2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಚಾಲನೆ

ಉಡುಪಿ, ಜ.7: ಉಡುಪಿ ನಗರಸಭೆಯ ಕೊಡಂಕೂರು ವಾರ್ಡಿನ ನೆರೆಪೀಡಿತ ತಾರಕಟ್ಟ ಪ್ರದೇಶದಲ್ಲಿ...
error: Content is protected !!