Wednesday, January 8, 2025
Wednesday, January 8, 2025

ರಥಬೀದಿ ಕಾಲೇಜು: ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮಗಳ ಉದ್ಘಾಟನೆ

ರಥಬೀದಿ ಕಾಲೇಜು: ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮಗಳ ಉದ್ಘಾಟನೆ

Date:

ಮಂಗಳೂರು, ಜ.6: ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇದರ ಐ.ಕ್ಯೂ.ಎ.ಸಿ, ಇತಿಹಾಸ ವಿಭಾಗ ಹಾಗೂ ಮಾನವಿಕ ಸಂಘದ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸ್ವಾತಂತ್ರ‍್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಯ ಅಂಗವಾಗಿ ನಡೆಯುವ ಕಾರ್ಯಕ್ರಮಗಳನ್ನು ದಿನಾಂಕ ೦೬-೦೧-೨೦೨೫ರಂದು ದೀಪ ಬೆಳಗಿಸುವುದರ ಮೂಲಕ ಪ್ರೊ.ಗಣಪತಿ ಗೌಡ ಪ್ರಾಂಶುಪಾಲರು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಉದ್ಘಾಟಿಸಿದರು. ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಕರ್ನಾಟಕದ ಜನರಲ್ಲಿ ಏಕೀಕರಣಕ್ಕೆ ಸ್ಪೂರ್ತಿಯನ್ನು ನೀಡುವುದರ ಜೊತೆಗೆ, ಜನರಲ್ಲಿ ಸ್ವಾತಂತ್ರ‍್ಯ ಹೋರಾಟದ ಮನೋಭಾವನೆಯನ್ನು ಹೆಚ್ಚಿಸಿತ್ತು. ಮಾತ್ರವಲ್ಲದೆ, ಸ್ವದೇಶಿ ಆಂದೋಲನ, ಅಸ್ಪೃಶ್ಯತೆ ನಿವಾರಣೆ, ಖಾದಿ ಬಳಕೆ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲಿ ಪ್ರಚಾರಗೊಳಿಸಿತ್ತು ಎಂದು ಹೇಳುವುದರ ಮೂಲಕ ವಿದ್ಯಾರ್ಥಿಗಳಿಗೆ ಈ ಅಧಿವೇಶನದ ಐತಿಹಾಸಿಕ ಮಹತ್ವವನ್ನು ವಿವರಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ., ಅವರು ಸ್ವಾತಂತ್ರ‍್ಯ ಹೋರಾಟದಲ್ಲಿ ನಡೆದ ತ್ಯಾಗ ಬಲಿದಾನವನ್ನು ವಿದ್ಯಾರ್ಥಿಗಳು ತಿಳಿದುಕೊಂಡು ದೇಶದ ಇತಿಹಾಸದ ಬಗ್ಗೆ ಹೆಮ್ಮೆ ಹಾಗೂ ಗೌರವಗಳನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.

ಕಾರ್ಯಕ್ರಮದ ಸಂಯೋಜಕರಾದ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರಾದ ಜ್ಯೋತಿ ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಐ.ಕ್ಯೂ.ಎ.ಸಿ ಸಹ ಸಂಚಾಲಕರಾದ ಡಾ, ಜ್ಯೋತಿಪ್ರಿಯ, ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಕೃಷ್ಣಪ್ರಭ ಉಪಸ್ಥಿತರಿದ್ದರು. ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿಗಳಾದ ನವಿತಾ ಸ್ವಾಗತಿಸಿ, ನಿಶಾ ಕುಮಾರಿ ವಂದಿಸಿ, ಮೊಹಮ್ಮದ್ ಆಶಿಕ್ ಕಾರ್ಯಕ್ರಮ ನಿರ್ವಹಿಸಿದರು. ಉದ್ಘಾಟನೆಯ ನಂತರ ವಿದ್ಯಾರ್ಥಿಗಳಿಗೆ ಬೆಳಗಾವಿ ಅಧಿವೇಶನದ ಕುರಿತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯಮಟ್ಟದ ಅರ್ಹತಾ ಪರೀಕ್ಷೆ (KSET): ಕೋಟೇಶ್ವರ ಸರ್ಕಾರಿ ಕಾಲೇಜಿನ ಮೂರು ವಿದ್ಯಾರ್ಥಿಗಳು ಉತ್ತೀರ್ಣ

ಕುಂದಾಪುರ, ಜ.8: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ಅರ್ಚಕರಿಗೆ ಡಿಬಿಟಿ ಮೂಲಕ ತಸ್ತೀಕ್ ಪಾವತಿ: ಅರ್ಜಿ ಆಹ್ವಾನ

ಉಡುಪಿ, ಜ.8: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಅರ್ಚಕರಿಗೆ...

ಜ.11: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ

ಉಡುಪಿ, ಜ.8: ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ...

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜ.8: ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮಯೋಜನೆಯಡಿ ನೇರಗುತ್ತಿಗೆ ಆಧಾರದಲ್ಲಿ...
error: Content is protected !!