Thursday, January 9, 2025
Thursday, January 9, 2025

ಕೊಡಂಕೂರು: ರೂ. 2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಚಾಲನೆ

ಕೊಡಂಕೂರು: ರೂ. 2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಚಾಲನೆ

Date:

ಉಡುಪಿ, ಜ.7: ಉಡುಪಿ ನಗರಸಭೆಯ ಕೊಡಂಕೂರು ವಾರ್ಡಿನ ನೆರೆಪೀಡಿತ ತಾರಕಟ್ಟ ಪ್ರದೇಶದಲ್ಲಿ ಸುಮಾರು ರೂ. 2.50 ಕೋಟಿ ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕಳೆದ ಹಲವು ದಶಕಗಳ ಸ್ಥಳೀಯರ ಬೇಡಿಕೆಯಂತೆ ಕರ್ನಾಟಕ ನೀರಾವರಿ ನಿಗಮದ ಮೂಲಕ 2.50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಿಸಿ, ಸಂಪರ್ಕ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿದ್ದು, ಮಳೆಗಾಲದಲ್ಲಿ ನೀರು ಸರಾಗ ಹರಿದು ನೆರೆ ಸೃಷ್ಟಿಯಾಗುವ ಸಮಸ್ಯೆ ಪರಿಹಾರವಾಗಲಿದ್ದು ನೂತನ ರಸ್ತೆ ಕೊಡಂಕೂರಿನಿಂದ ಮೂಡಬೆಟ್ಟು ಭಾಗಕ್ಕೆ ನೇರ ಸಂಪರ್ಕ ಕಲ್ಪಿಸಲಿದೆ ಎಂದರು.

ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ನಗರಸಭಾ ಸದಸ್ಯರಾದ ಸಂಪಾವತಿ, ಹರೀಶ್ ಶೆಟ್ಟಿ, ಟಿ. ಜಿ. ಹೆಗ್ಡೆ, ಸವಿತಾ ಹರೀಶ್ ರಾಮ್, ಹರೀಶ್ ರಾಮ್, ಸಂದೀಪ್ ಕೋಟ್ಯಾನ್, ರಾಜೇಶ್, ಜಯಕರ ಪಾಲನ್, ಪ್ರಶಾಂತ್ ಪೂಜಾರಿ, ಶಿವರಾಜ ಕರ್ಕೇರ, ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು, ಗುತ್ತಿಗೆದಾರರು ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಕನಿಷ್ಠ 4 ಮಂದಿ ಸಾವು, ಹಲವರಿಗೆ ಗಾಯ

ಯು.ಬಿ.ಎನ್.ಡಿ., ಜ.8: ತಿರುಮಲ ಬೆಟ್ಟದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವೈಕುಂಠ ದ್ವಾರ...

ರಾಜ್ಯಮಟ್ಟದ ಅರ್ಹತಾ ಪರೀಕ್ಷೆ (KSET): ಕೋಟೇಶ್ವರ ಸರ್ಕಾರಿ ಕಾಲೇಜಿನ ಮೂರು ವಿದ್ಯಾರ್ಥಿಗಳು ಉತ್ತೀರ್ಣ

ಕುಂದಾಪುರ, ಜ.8: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ಅರ್ಚಕರಿಗೆ ಡಿಬಿಟಿ ಮೂಲಕ ತಸ್ತೀಕ್ ಪಾವತಿ: ಅರ್ಜಿ ಆಹ್ವಾನ

ಉಡುಪಿ, ಜ.8: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಅರ್ಚಕರಿಗೆ...

ಜ.11: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ

ಉಡುಪಿ, ಜ.8: ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ...
error: Content is protected !!