ಬ್ರಹ್ಮಾವರ, ಜ.8: ಇಂದಿನ ನಮ್ಮ ಶಿಕ್ಷಣ ಪದ್ಧತಿ ವಿದ್ಯಾರ್ಥಿಗಳ ಮನದ ಬಾಗಿಲಿಗೆ ಹಾಕಿದ ತಡೆಗಳನ್ನು ದಾಟಲು ಕಲಿಸುತ್ತಿಲ್ಲ. ಈ ತಡೆಗಳೆಂದರೆ ವಿಶ್ವಾಸದ ಕೊರತೆ, ಕೀಳರಿಮೆ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯದ ಕೊರತೆ, ಇಚ್ಛಾಶಕ್ತಿಯ ಕೊರತೆ, ಕೌಶಲ್ಯಶಕ್ತಿಯ ಕೊರತೆ, ಸಂವಹನ ಸಾಮರ್ಥ್ಯದ ಕೊರತೆ. ನಾವು ಅಂಕ ಗಳಿಕೆಗೆಯ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ಬೆಳವಣಿಗೆಗೆ ಬೇಕಾದ ಪೂರಕ ಶಿಕ್ಷಣ ನೀಡುವಲ್ಲಿ ವಿದ್ಯಾರ್ಥಿಗಳನ್ನು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಪ್ರೇೂತ್ಸಾಹಿಸಬೇಕಾದ ಅಗತ್ಯತೆಯಿದೆ ಎಂದು ಅಂಕಣಕಾರ ಎಂ.ಜಿ.ಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.
ಚೇರ್ಕಾಡಿ ಶಾರದಾ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೇೂತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಮಿತಿಯ ಅಧ್ಯಕ್ಷರಾದ ಬಿ. ಮಹಾಬಲೇಶ್ವರ ಉಡುಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚೇರ್ಕಾಡಿ ಶಾರದಾ ಹೈಸ್ಕೂಲು ಮುಖ್ಯಸ್ಥರಾದ ಸಿ.ಮಂಜುನಾಥ್ ಭಾಗವಹಿಸಿ ಮಾತನಾಡಿದರು. ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಎಚ್.ಸುದಶ೯ನ ಹೆಗ್ಡೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮಿತಿಯ ಕೇೂಶಾಧಿಕಾರಿ ಶಶಿಧರ್ ಶೆಟ್ಟಿ, ಆಡಳಿತಾಧಿಕಾರಿ ದಿನಕರ್ ಆರ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯೇೂಪಾಧ್ಯಾಯಿನಿ ಚೈತ್ರಾ ಎಂ.ಶೆಟ್ಟಿ ಶಾಲಾ ವರದಿ ವಾಚಿಸಿದರು. ಶಾಲಾ ಆಡಳಿತ ಸಮಿತಿಯ ಉಪಾಧ್ಯಕ್ಷ ಆರೂರು ತಿಮ್ಮಪ್ಪ ಶೆಟ್ಟಿ ವಂದಿಸಿದರು. ವಿವಿಧ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಯಕ್ಷಗಾನ ರಂಗದಲ್ಲಿ ವಿಶೇಷ ಸಾಧನಗೈದ ಪ್ರಶಸ್ತಿ ಪುರಸ್ಕೃತ ಚೇರ್ಕಾಡಿ ಮಂಜುನಾಥ ಪ್ರಭು ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.