ಉಡುಪಿ, ಜ.10: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ, ವತಿಯಿಂದ ಜನವರಿ 13 ರಿಂದ 15 ರ ವರೆಗೆ ಮಕರ ಸಂಕ್ರಾಂತಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠದ ಬಂಡಾರಕೇರಿ ಮಠದ ಆವರಣದಲ್ಲಿ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಮೇಳ ನಡೆಯಲಿದೆ. ಈ ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ಗೃಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಬಟ್ಟೆ ಬ್ಯಾಗ್, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಮಣ್ಣಿನ ಹಣತೆ, ಗೋ ಉತ್ಪನ್ನ, ಹೆಬ್ರಿ ಹನಿ ಇತ್ಯಾದಿ ಉತ್ಪನ್ನಗಳು ಲಭ್ಯವಿರುತ್ತದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹ ನೀಡುವಂತೆ ಉಡುಪಿ ಜಿಲ್ಲಾ ಪಂಚಾಯತ್‌ನ ಕಚೇರಿ ಪ್ರಕಟಣೆ ತಿಳಿಸಿದೆ.