Saturday, January 11, 2025
Saturday, January 11, 2025

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ

Date:

ಉಡುಪಿ, ಜ.11: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಜನವರಿ 15 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಹೆಬ್ರಿ ತಾಲೂಕು ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ: ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಕಾಪು, ಜ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಫೆಬ್ರವರಿ...

ಎಲ್.ವಿ.ಟಿ: ವೈಕುಂಠ ಏಕಾದಶಿಯ ವಿಶೇಷ ಅಲಂಕಾರ

ಉಡುಪಿ, ಜ.10: ವೈಕುಂಠ ಏಕಾದಶಿಯ ಪ್ರಯುಕ್ತ ಶುಕ್ರವಾರ ಉಡುಪಿ ಪುತ್ತೂರಿನ ಶ್ರೀ...

ರಾಜ್ಯಮಟ್ಟದ ಟೆನ್ನಿ ಕಾಯ್ಟ್: ಸರಸ್ವತಿ ವಿದ್ಯಾಲಯ ಪದವಿಪೂರ್ವ ವಿದ್ಯಾರ್ಥಿನಿಯರ ಸಾಧನೆ

ಗಂಗೊಳ್ಳಿ, ಜ.10: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಡಾನ್ ಬಾಸ್ಕೊ...

ಜ.13 ರಿಂದ 15: ಉಡುಪಿಯಲ್ಲಿ ಸಂಜೀವಿನಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಉಡುಪಿ, ಜ.10: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ...
error: Content is protected !!