ಮಣಿಪಾಲ, ಜ.15: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ ಜರುಗಿತು. ಮಣಿಪಾಲ ಪೊಲೀಸ್ ಠಾಣೆಯ ಎ.ಎಸ್.ಐ. ನಾಗೇಶ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸರಕಾರ ಹಾಗೂ ಪೊಲೀಸ್ ಇಲಾಖೆಯ ಪ್ರಾಯೋಜಿತ ಕಾರ್ಯಕ್ರಮ ‘ರಸ್ತೆ ಸುರಕ್ಷಾ ಮಾಸಾಚರಣೆ’ಯ ಮಹತ್ವ ಇಂದಿನ ಯುವಜನತೆಗೆ ಇಂತಹ ಕಾರ್ಯಕ್ರಮಗಳ ಅಗತ್ಯತೆಗಳ ಕುರಿತು ವಿವರಿಸಿ, ವಿದ್ಯಾರ್ಥಿಗಳ ಸಂದೇಹಗಳಿಗೂ ಉತ್ತರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಬೋಧಕ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.