ಕೋಟ, ಜ.20: ಸೇವಾ ಸಂಗಮ ಶಿಶು ಮಂದಿರ ಸಂಸ್ಕಾರಭರಿತ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ಆದ್ದರಿಂದ ಮಕ್ಕಳ ಪ್ರಾಥಮಿಕ ಶಿಕ್ಷಣವನ್ನು ಶಿಶುಮಂದಿರಕ್ಕೆ ಮೀಸಲಿಡಿ ಎಂದು ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇಗುಲದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ಹೇಳಿದರು. ಕೋಟದ ಸೇವಾ ಸಂಗಮ ಶಿಶು ಮಂದಿರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆಯನ್ನು ಸೇವಾ ಸಂಗಮ ಶಿಶು ಮಂದಿರದ ಅಧ್ಯಕ್ಷೆ ನಾಗಲಕ್ಷ್ಮಿ ಹೆಗ್ಡೆ ವಹಿಸಿದ್ದರು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಶುಭ ಹಾರೈಸಿದರು. ಸೇವಾ ಸಂಗಮದ ವಿಶ್ವಸ್ಥ ಮಂಡಳಿಯ ಪ್ರಮುಖರಾದ ಕಲ್ಪನಾ ಭಾಸ್ಕರ್ ದಿಕ್ಸೂಚಿ ಭಾಷಣ ಮಾಡಿದರು. ಪುಟಾಣಿಗಳಿಂದ ದೀಪ ನೃತ್ಯ, ಸಂಸ್ಕೃತ ಶ್ಲೋಕ ಗೀತೆಗಳ ಪಠಣ ನಡೆಯಿತು.
ಕೋಟ ಶಿಶು ಮಂದಿರದ ಉಪಾಧ್ಯಕ್ಷೆ ಗೀತಾ ಎ ಕುಂದರ್, ಪ್ರಮುಖರಾದ ವಸುಧಾ ಪ್ರಭು, ಸುಶೀಲ ಸೋಮಶೇಖರ್, ಚಂದ್ರಿಕಾ ಭಟ್ ಮುಂತಾದವರು ಉಪಸ್ಥಿತರಿದ್ದರು. ವ್ಯವಸ್ಥಾಪಕಿ ಭಾಗ್ಯ ವಾದಿರಾಜ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾಗೇಶ್ವರಿ ಮಯ್ಯ ನಿರೂಪಿಸಿದರು. ಕಾರ್ಯದರ್ಶಿ ಸುಷ್ಮಾ ದಯಾನಂದ್ ವಂದಿಸಿದರು.