Monday, January 20, 2025
Monday, January 20, 2025

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

Date:

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ ಭಾರತ್, ನೆಹರು ಯುವ ಕೇಂದ್ರ ಉಡುಪಿ, ಚೈತನ್ಯ ಮಿತ್ರ ಮಂಡಳಿ, ಚೈತನ್ಯ ಮಹಿಳಾ ಮತ್ತು ಯುವತಿ ಮಂಡಳಿ ಹಾಳೆಕಟ್ಟೆ ಕಲ್ಯಾ ಇವರ ಆಶ್ರಯದಲ್ಲಿ ಕಾರ್ಕಳ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ರವಿವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಯಾ ಇಲ್ಲಿ ಜರುಗಿತು. ಗ್ರಾಮ ಪಂಚಾಯತ್ ಕಲ್ಯಾ ಅಧ್ಯಕ್ಷೆ ಪೂಜಾ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲ್ಲಿಕಾರ್ಜುನ ಎಸ್ ಎಸ್ ವಹಿಸಿದರು. ವಾಲಿಬಾಲ್ ಕ್ರೀಡಾಂಗಣವನ್ನು ಪಕಾಲ ಕಾಂಪ್ಲೆಕ್ಸ್ ಕೆದಿಂಜೆ ಮಾಲಕ ಉದ್ಯಮಿ ಜೆರಾಲ್ಡ್ ಪಿಂಟೋ ಉದ್ಘಾಟಿಸಿದರು.

ವೇದಿಕೆಯಲ್ಲಿ ಸಂಜೀವ ಶೆಟ್ಟಿ, ಪ್ರೇಮ ಪೂಜಾರ್ತಿ, ಶಂಕರ್ ಆಚಾರ್ಯ ಅಧ್ಯಕ್ಷರು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಪ್ರವೀಣ್ ಪೂಜಾರಿ ಅಧ್ಯಕ್ಷರು ಯುವಕ ಮಂಡಲ ಕಲ್ಯಾ, ವಿಶ್ವೇಶ್ವರ ಭಟ್ ಅಧ್ಯಕ್ಷರು ಮಹಾಮಾಯಿ ಯುವಕ ಮಂಡಲ ನಂದಳಿಕೆ, ಸತೀಶ್ ಪೂಜಾರಿ ಹೊಸಮನೆ ಕಲ್ಯಾ, ಚೈತನ್ಯ ಮಹಿಳಾ ಮತ್ತು ಯುವತಿ ಮಂಡಲ ಅಧ್ಯಕ್ಷೆ ಪ್ರತಿಮಾ ಸಿ ಅಮೀನ್, ಸ್ಥಾಪಕ ಅಧ್ಯಕ್ಷೆ ರೂಪಾ ಯತೀಶ್, ಚೈತನ್ಯ ಮಿತ್ರ ಮಂಡಳಿಯ ಕ್ರೀಡಾ ಕಾರ್ಯದರ್ಶಿ ಸುದರ್ಶನ್ ಪೂಜಾರಿ, ಮಹಿಳಾ ಮಂಡಳಿಯ ಕ್ರೀಡಾ ಕಾರ್ಯದರ್ಶಿ ವೀಣಾ ಉಪಸ್ಥಿತರಿದ್ದರು. ಯತೀಶ್ ಎನ್ ಸ್ವಾಗತಿಸಿ, ಧೀರಜ್ ಶೆಟ್ಟಿ ವಂದಿಸಿದರು. ಶ್ರೇಯ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಿದ ಇಸ್ರೇಲ್

ಯು.ಬಿ.ಎನ್.ಡಿ., ಜ.20: ಇಸ್ರೇಲ್ ಬಂಧನದಲ್ಲಿದ್ದ 90 ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಲಾಯಿತು....
error: Content is protected !!