Monday, January 27, 2025
Monday, January 27, 2025

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ಸಂಭ್ರಮದ ಗಣರಾಜ್ಯೋತ್ಸವ

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ಸಂಭ್ರಮದ ಗಣರಾಜ್ಯೋತ್ಸವ

Date:

ಕಾರ್ಕಳ, ಜ.26: ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸಹ ಸಂಸ್ಥಾಪಕರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಸಂವಿಧಾನವು ಈ ದೇಶದ ಎಲ್ಲ ಜನರಿಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಸಮಾನತೆಯ ಹಕ್ಕನ್ನು ನೀಡಿ ಸುಭದ್ರ ಜೀವನ ನಡೆಸುವಲ್ಲಿ ಸಹಕಾರಿಯಾಗಿದೆ. ದೇಶ ಸ್ವಾತಂತ್ರ್ಯಗೊಳ್ಳುವಲ್ಲಿ ಅನೇಕ ಭಾರತೀಯರ ತ್ಯಾಗ ಬಲಿದಾನವಿದೆ. ಇವರ ಹೋರಾಟದ ಫಲವೇ ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವಿಸುವಂತೆ ಮಾಡಿದೆ. ದೇಶ ನನಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾನು ಏನು ಕೊಟ್ಟಿದೆ ಎನ್ನುವುದು ನಾವೆಲ್ಲರೂ ಆತ್ಮಾವಲೋಕನವನ್ನು ಮಾಡಿಕೊಳ್ಳಬೇಕು. ಸಂವಿಧಾನವನ್ನು ರಚಿಸುವಲ್ಲಿ ಶ್ರಮಿಸಿದ ಮಹನೀಯರನ್ನು ನಾವೆಲ್ಲರೂ ಗೌರವಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಬೋಧಕ ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ. 29: ಕಿನ್ನಿಮೂಲ್ಕಿಯಲ್ಲಿ ನೇರ ಸಂದರ್ಶನ

ಉಡುಪಿ, ಜ.27: ಜನವರಿ 29 ರಂದು ಬೆಳಗ್ಗೆ 10.30 ಕ್ಕೆ ನಗರದ...

ಫೆ. 19: ಅಜ್ಜರಕಾಡು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ

ಉಡುಪಿ, ಜ.27: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ...

ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ: ವಾರ್ಷಿಕ ಭಜನಾ ಮಂಗಲೋತ್ಸವ

ಕಾರ್ಕಳ, ಜ.27: ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ 7ನೇ...

ಮುಡಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೋಟಿಸ್

ಬೆಂಗಳೂರು, ಜ.27: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಭೂ ಮಂಜೂರಾತಿಗೆ ಸಂಬಂಧಿಸಿದ...
error: Content is protected !!