Friday, January 31, 2025
Friday, January 31, 2025

ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ

ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ

Date:

ಉಡುಪಿ, ಜ.29: ಉಡುಪಿ ನಗರಸಭಾ ವತಿಯಿಂದ ಪೌರಕಾರ್ಮಿಕರುಗಳಿಗೆ ಮಾಸ್ಟರ್ ಆರೋಗ್ಯ ತಪಾಸಣಾ ಶಿಬಿರ ಬುಧವಾರ ನಗರದ ಸಿಟಿ ಆಸ್ಪತ್ರೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಉದ್ಘಾಟಿಸಿ, ನಗರಸಭೆ ವತಿಯಿಂದ ಆಯೋಜಿಸಿರುವ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನವನ್ನು ಎಲ್ಲಾ ಪೌರಕಾರ್ಮಿಕರು ಪಡೆದುಕೊಳ್ಳುವುದರೊಂದಿಗೆ ಆರೋಗ್ಯವಂತರಾಗಿ ಗೈರು ಹಾಜರಿ ಇಲ್ಲದೇ ಕರ್ತವ್ಯ ನಿರ್ವಹಿಸಲು ಕರೆ ನೀಡಿದರು. ಕೊಡವೂರು ವಾರ್ಡ್ನ ನಗರಸಭಾ ಸದಸ್ಯ ವಿಜಯ ಕೊಡವೂರು ಮಾತನಾಡಿ, ಪೌರಕಾರ್ಮಿಕರ ಆರೋಗ್ಯ ದೃಷ್ಟಿಯಿಂದ ಉಡುಪಿ ನಗರಸಭೆಯು ಪೌರಕಾರ್ಮಿಕರ ಮಾಸ್ಟರ್ ಹೆಲ್ತ್ ಚೆಕಪ್ ಅನ್ನು ವ್ಯವಸ್ಥಿತವಾಗಿ ನಡೆಸುತ್ತಾ ಬಂದಿದ್ದು, ನಗರದ ಸ್ವಚ್ಛತಾ ಕಾರ್ಯದ ಹಿತದೃಷ್ಟಿಯ ಜೊತೆಗೆ ಪೌರಕಾರ್ಮಿಕರ ಆರೋಗ್ಯವನ್ನೂ ಸಹ ಪರಿಗಣಿಸಲಾಗಿರುತ್ತದೆ ಎಂದು ತಿಳಿಸಿದರು.

ಸಿಟಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವೆಂಕಟೇಶ್ ಶಾನುಭಾಗ್ ಮಾಸ್ಟರ್ ಆರೋಗ್ಯ ತಪಾಸಣಾ ಶಿಬಿರದಲ್ಲಿನ ಸಂಪೂರ್ಣ ಮಾಹಿತಿಯನ್ನು ನೀಡಿದರು. ನಗರಸಭೆಯ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ನಗರಸಭೆಯ ಸದಸ್ಯರುಗಳಾದ ರಶ್ಮಿ ಭಟ್, ಟಿ.ಜಿ ಹೆಗ್ಡೆ, ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಿಶ್ವನಾಥ ಶಾನುಭಾಗ್, ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕರಾದ ಸುರೇಂದ್ರ ಹೋಬಳಿದಾರ್, ಹರೀಶ್ ಬಿಲ್ಲವ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಿರಿಯ ಆರೋಗ್ಯ ನಿರೀಕ್ಷಕ ಪ್ರಕಾಶ್ ಪ್ರಭು ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಕ್ಕಳ ಸಂಬಂಧಿತ ಕಾಯ್ದೆಗಳ ಕುರಿತು ತರಬೇತಿ ಕಾರ್ಯಾಗಾರ

ಉಡುಪಿ, ಜ.30: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು,...

ಕಾರಂತರ ಮೌಲ್ಯ, ನಿಷ್ಠೆಯ ಬದುಕು ಪ್ರತಿಯೊಬ್ಬರಿಗೂ ಆದರ್ಶ: ಡಾ.ಮಹಾಬಲೇಶ್ವರ ರಾವ್

ಉಡುಪಿ, ಜ.30: ಯಾವುದೇ ಅಡಂಬರ ಸೋಗಿನ ಜೀವನ ನಡೆಸದೇ ಸರಳವಾದ ಮೌಲ್ಯ...

ಪತ್ರ ಲೇಖನ ಸ್ಪರ್ಧೆ; ಪ್ರಥಮ ಬಹುಮಾನ ರೂ. 50,000

ಉಡುಪಿ, ಜ.30: ಅಂಚೆ ಇಲಾಖೆಯ ವತಿಯಿಂದ ಯು.ಪಿ.ಯು ಇಂಟರ್‌ನ್ಯಾಷನಲ್ ಲೆಟರ್ ರೈಟಿಂಗ್...

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್

ಪ್ರಯಾಗರಾಜ್, ಜ.30: ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಅವರು ಪ್ರಯಾಗರಾಜ್‌ನಲ್ಲಿ ನಡೆದ...
error: Content is protected !!