ಉಡುಪಿ, ಫೆ.7: ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿಯವರನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡದ ಸದಸ್ಯರು
ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಬ್ರಾಹ್ಮೀ ಮುಹೂರ್ತದಲ್ಲಿ ತ್ರಿವೇಣಿ ಸಂಗಮದ ಪುಣ್ಯ ತೀರ್ಥ ಸ್ನಾನವು ಸ್ವಾಮೀಜಿಯವರ ನೇತೃತ್ವದಲ್ಲಿ ನೆರವೇರಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರಾದ ಸತೀಶ್ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ, ಕೋಶಾಧಿಕಾರಿ ಸಿಎ ಸುರೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ಮತ್ತು ಡಾ. ಪ್ರಖ್ಯಾತ್ ಶೆಟ್ಟಿ ಇದ್ದರು.
ಯಕ್ಷಧ್ರುವ ತಂಡದಿಂದ ಪಲಿಮಾರು ಶ್ರೀಗಳ ಭೇಟಿ

ಯಕ್ಷಧ್ರುವ ತಂಡದಿಂದ ಪಲಿಮಾರು ಶ್ರೀಗಳ ಭೇಟಿ
Date: