ಇನ್ನಂಜೆ, ಫೆ.9: ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿಕೆರೆ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಪ್ರಧಾನ ಕಾರ್ಯದರ್ಶಿಗಳಾದ ರವಿ ಕೋಟ್ಯಾನ್, ಸುರೇಖಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.