Monday, February 24, 2025
Monday, February 24, 2025

ಸಮಾಜದ ಅಂಕುಡೊಂಕುಗಳನ್ನು ವಚನಗಳ ಮೂಲಕ ತಿದ್ದಿದವರು ವಚನಕಾರರು: ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ

ಸಮಾಜದ ಅಂಕುಡೊಂಕುಗಳನ್ನು ವಚನಗಳ ಮೂಲಕ ತಿದ್ದಿದವರು ವಚನಕಾರರು: ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ

Date:

ಉಡುಪಿ, ಫೆ.10: 12ನೇ ಶತಮಾನದಲ್ಲಿದ್ದ ವಚನಕಾರರು ಸಮಾಜದ ಅಂಕುಡೊಂಕುಗಳನ್ನು ತಮ್ಮ ವಚನಗಳ ಮೂಲಕ ತಿದ್ದುವಲ್ಲಿ ನಿರತರಾಗಿದ್ದರು. ವಚನಕಾರರ ವಚನಗಳನ್ನು ಹಾಗೂ ಅವರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ವಚನಕಾರರು ಕನ್ನಡ ಸಾಹಿತ್ಯಕ್ಕೆ ಸಾಕಷ್ಟು ವಚನಗಳನ್ನು ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾಯಕ ಶರಣರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ವಚನಕಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಸಮಾನತೆ, ಭ್ರಾತತ್ವ ಮತ್ತು ಆತ್ಮವಿಮರ್ಶೆ ಮಾಡಿಕೊಳ್ಳುವುದರ ಜೊತೆಗೆ ತಾವು ಮಾಡುವ ಕಾಯಕದಲ್ಲಿ ದೇವರನ್ನೇ ಕಂಡುಕೊಂಡು ತಮ್ಮ ವಚನಗಳ ಮೂಲಕ ಜನರಲ್ಲಿ ಅರಿವು ಮತ್ತು ಜ್ಞಾನವನ್ನು ಮೂಡಿಸುವ ಪ್ರಯತ್ನ ಮಾಡುತ್ತಿದ್ದರು. ಒಳಗೊಂದು ಹೊರಗೊಂದು ಭಾವನೆಗಳನ್ನು ಹೊಂದಿರುವ ಪ್ರಸಕ್ತ ಸಮಾಜದಲ್ಲಿ, ವಚನಕಾರರು 800 ವರ್ಷಗಳ ಹಿಂದೆಯೇ ತಮ್ಮ ನೇರ ನಡೆನುಡಿಯ ಮೂಲಕ ಜನಪ್ರಿಯತೆಯನ್ನು ಗಳಿಸಿದ್ದರು. 12ನೇ ಶತಮಾನದಲ್ಲಿದ್ದ ಆರ್ಥಿಕ ಬಿಕ್ಕಟ್ಟನ್ನು ಹೋಗಲಾಡಿಸಲು ಪ್ರಮುಖ ಪಾತ್ರ ವಹಿಸಿದರು. ಅವರಂತೆ ನಾವು ಕೂಡ ಈ ಎಲ್ಲಾ ಬಿಕ್ಕಟ್ಟನ್ನು ತೊರೆದು ಹಾಕಲು ಮುಖ್ಯ ಆದ್ಯತೆ ನೀಡಬೇಕಾಗಿದೆ ಎಂದರು.

ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ವಿಶೇಷ ಉಪನ್ಯಾಸ ನೀಡಿ, ಮಾದಾರ ಚೆನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗಪೆದ್ದಿ ಮೊದಲಾದ ಕಾಯಕ ಶರಣರು ಜಾತಿ ಸಂಕೋಲೆಯಿಂದ ಹೊರಬಂದು ಸಮಾನತೆಯ ತತ್ವವನ್ನು ಪ್ರತಿಪಾದಿಸಿದರು. ಕಾಯಕ ಶರಣರು ಕಾಯಕವನ್ನು ಪ್ರೀತಿಸಿ ಗೌರವಿಸಿದರೆ ಮಾತ್ರ ದೇವರನ್ನು ಕಾಣಲು ಸಾಧ್ಯ ಎಂದು ನಂಬಿದ್ದರು ಹಾಗೂ ಅದರಂತೆ ಲೋಕಕ್ಕೆ ಕಾಯಕ ತತ್ವವನ್ನು ಪ್ರತಿಪಾದಿಸಿದರು. ವೃತ್ತಿಯಲ್ಲಿ ಪರಮಾತ್ಮನನ್ನು ಹುಡುಕಿದರೆ ಆಗ ಸದ್ಗತಿ ದೊರೆಯಲು ಸಾಧ್ಯ. 12ನೇ ಶತಮಾನದ ಚಳುವಳಿ ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ಭಾರತದಲ್ಲಿ ಪ್ರಭಾವ ಬೀರಿತ್ತು ಎಂದರು.

ಉಪತಹಶೀಲ್ದಾರರುಗಳಾದ ನವನೀತ್, ರಾಮಚಂದ್ರ ಭಟ್, ಶ್ರೀನಿಧಿ, ಜಾನಪದ ಕಲಾವಿದ ವಾಸು ಬನ್ನಂಜೆ ಹಾಗೂ ಆಡಳಿತ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಇಲಾಖೆಯ ಸಿಬ್ಬಂದಿ ವರ್ಷಾ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!